Karnataka Rain: ರೈತರಿಗೆ ಗುಡ್ ನ್ಯೂಸ್; ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ!
Karnataka Rain: ಕರ್ನಾಟಕ ಸೇರಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಶೇ. 105ರಷ್ಟು ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಬೆಂಗಳೂರು: ಬೇಸಿಗೆಯಲ್ಲಿ ರಾಜ್ಯದ ಹಲವೆಡೆ ಮಳೆ (Karnataka Rain) ಅಬ್ಬರಿಸುತ್ತಿರುವ ನಡುವೆ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೈರುತ್ಯ ಮುಂಗಾರಿನ (ಜೂನ್ – ಸೆಪ್ಟೆಂಬರ್ 2025 ರ) ದೀರ್ಘ ಶ್ರೇಣಿಯ ಮಳೆ ಮುನ್ಸೂಚನೆಯನ್ನು (Monsoon Season Forecast 2025) ಹವಾಮಾನ ಇಲಾಖೆ ನೀಡಿದ್ದು, ಈ ಬಾರಿ ಕರಾವಳಿ, ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಅಧಿಕ ಮಳೆ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕರ್ನಾಟಕ ಸೇರಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ದೀರ್ಘಾವಧಿಯ ಸರಾಸರಿ ಮಳೆಯ ಪ್ರಮಾಣ 87 ಸೆಂ.ಮೀ. ಇದ್ದು, ಈ ಬಾರಿ ಶೇ. 105ರಷ್ಟು ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ. ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಬಿಸಿಗಾಳಿ ಬೀಸುತ್ತಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ಬಿಸಿಗಾಳಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ನೀರಿನ ಕೊರತೆ ಎದುರಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಸೋಮವಾರ ಭರ್ಜರಿ ಮಳೆಯಾಗಿದೆ. ಅದೇ ರೀತಿ ಮಂಗಳವಾರ ರಾತ್ರಿ ಕೂಡ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಇನ್ನು ಏ.16ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ತುಮಕೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ನೈಋತ್ಯ ಮುಂಗಾರಿನ (ಜೂನ್ – ಸೆಪ್ಟೆಂಬರ್ 2025 ರ) ದೀರ್ಘ-ಶ್ರೇಣಿಯ ಮಳೆ ಮುನ್ಸೂಚನೆ
— Karnataka State Natural Disaster Monitoring Centre (@KarnatakaSNDMC) April 15, 2025
ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆ ಗಿಂತ ಅಧಿಕ ಮಳೆ
ದಕ್ಷಿಣ ಕರ್ನಾಟಕ ಭಾಗದಲ್ಲಿ ವಾಡಿಕೆ ಹಾಗೂ ವಾಡಿಕೆ ಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ.#KSNDMC @KarnatakaVarthe #KarnatakaRains pic.twitter.com/E3IrsTgjOV
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆ ಇದೆ.
ಏ.17ರಂದು ದಕ್ಷಿಣ ಒಳನಾಡಿನ ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ.18ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಏ.19ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ / ಬಲವಾದ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆ.
ಏ.20ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯದ ಆರೈಕೆ ಹೇಗೆ?
ಏ.21ರಂದು ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಗಳು ಮತ್ತು ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.