Self Harming: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
Self Harming: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂದಧಿಕರು ಆರೋಪ ಮಾಡಿದ್ದಾರೆ.


ಯಾದಗಿರಿ: ಕೌಟುಂಬಿಕ ಕಲಹದಿಂದ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂಧಿಕರೊಬ್ಬರು ಆರೋಪಿಸಿದ್ದಾರೆ.
ಮೃತ ದುರ್ದೈವಿ ನೀಲಾಬಾಯಿಗೆ ನಾಲ್ವರು ಪುತ್ರಿಯರು, ಒರ್ವ ಪುತ್ರ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳು ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿ ಬಳಿ ಹೋಗಿದ್ದಾಳೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ, ಇನ್ನೊಬ್ಬ ಮಗಳು ಸಂಜು (6) ಬಾವಿಗೆ ತಳ್ಳುವಾಗ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ವಿಷಯ ತಿಳಿದ ಸಂಬಂಧಿಕರು ಮತ್ತು ತಾಂಡಾದ ಜನರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿ ಶಂಕರ್, ಡಿವೈಎಸ್ಪಿ ಅರುಣ್ ಕುಮಾರ್, ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಅನುಮಾಸ್ಪದವಾಗಿ ವ್ಯಕ್ತಿಯ ಶವಪತ್ತೆ
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಗುಡಿಗೊಂಡನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿಯ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬಸವರಾಜು(40) ಮೃತದುರ್ದೈವಿ. ಮಂಗಳವಾರ ಬೆಳಗ್ಗೆ 9:30ಕ್ಕೆ ಮನೆಯಿಂದ ಹೊರಗೆ ಹೋದ ವ್ಯಕ್ತಿ, ಸಂಜೆ 5 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾನೆ. ಬಸವರಾಜುಗೆ ಒಬ್ಬಳು ಹೆಂಡತಿ ಇಬ್ಬರು ಗಂಡು ಮಕ್ಕಳಿದ್ದು, ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದ. ಆತನ ದೇಹದ ಮೇಲೆ ಗಾಯದ ಗುರುತುಗಳು ಹಾಗೂ ಅಲ್ಲಲ್ಲೇ ಚರ್ಮ ಕಿತ್ತು ಹೋಗಿರುವುದು ಕಂಡುಬಂದಿದೆ. ಹೀಗಾಗಿ ಬಸವರಾಜು ಸಾವು ಸಹಜವಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಹೊನ್ನವಳ್ಳಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Shocking News: ರಾಜ್ಯದಲ್ಲಿ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ: ಸಚಿವರಿಂದ ಮಾಹಿತಿ
ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಒಬ್ಬ ಸಾವು, ಹಲವರಿಗೆ ಗಾಯ
ಕೋಲಾರ : ರಾಜ್ಯದಲ್ಲಿ ಕೋಲಾರ (Kolar news) ಜಿಲ್ಲೆಯಲ್ಲಿ ರಸ್ತೆ ಅಪಘಾತ (Road Accident) ಸಂಭವಿಸಿದೆ. ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ (Bus Accident) ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಎಂಬಲ್ಲಿ ಆಂಧ್ರಪ್ರದೇಶದ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ್ ಎಂಬವರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ಸುವರ್ಣಮುಖಿ ಹಾಗೂ ಎ.ಆರ್. ಟ್ರಾವೆಲ್ಸ್ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮದನಪಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.