ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಸಿದ್ದರಾಮಯ್ಯಗೆ ಬಿಗ್‌ ಡೇ, ಮುಡಾ ಕೇಸ್‌ನಲ್ಲಿ ಕೋರ್ಟ್‌ ಆದೇಶ ಇಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು.

ಮುಡಾ

ಬೆಂಗಳೂರು, ಡಿ.18: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧದ ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಲೋಕಾಯುಕ್ತ (Lokayukta) ಕೊಟ್ಟ ಕ್ಲೀನ್‌ಚಿಟ್‌ ಕುರಿತು ನ್ಯಾಯಾಲಯ ಇಂದು (ಡಿ.18) ತೀರ್ಪು ನೀಡಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು.

ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ. ವಿಚಾರಣೆ ಮುಂದುವರಿಯಬಹುದು. ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ‌ ಹೊರಬೀಳಲಿದೆ.

ಏನಿದು ಪ್ರಕರಣ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಖುದ್ದು ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಅವರೇ ವಾದಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಸಹ ತಕರಾರು ಅರ್ಜಿ ಸಲ್ಲಿಸಿತ್ತು.

ಮುಡಾದ 63 ನಿವೇಶನಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಸಿಎಂ ಆದೇಶ

ಹರೀಶ್‌ ಕೇರ

View all posts by this author