ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕದಲ್ಲಿ ಮುರುಸು ಎಫೆಕ್ಟ್‌; ಹಲವು ಜಿಲ್ಲೆಗಳಲ್ಲಿ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ‘ಮುರುಸು’ ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯತ್ತ ಮುನ್ನಡೆಯುತ್ತಿದ್ದು, ಇದರ ಪ್ರಭಾವದಿಂದಾಗಿ ಇಂದು (ನವೆಂಬರ್ 3) ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮುರುಸು ಎಫೆಕ್ಟ್‌; ಹಲವು ಜಿಲ್ಲೆಗಳಲ್ಲಿ ಮಳೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 3, 2026 8:10 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ‘ಮುರುಸು’ ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯತ್ತ (Karnataka Weather) ಮುನ್ನಡೆಯುತ್ತಿದ್ದು, ಇದರ ಪ್ರಭಾವದಿಂದಾಗಿ ಇಂದು (ನವೆಂಬರ್ 3) ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿ ಭಾಗದಲ್ಲಿ ಚಂಡಮಾರುತ ಪ್ರವೇಶಿಸುವ ಸಾಧ್ಯತೆಯಿದೆ. ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾದಲ್ಲಿ ಅನಾಹುತ ಸೃಷ್ಟಿಸಿದ ʼಅರ್ನಾಬ್‌ʼ ಬೆನ್ನಲ್ಲೇ ಅಪ್ಪಳಿಸಲಿದೆ ಮುರಸು ಚಂಡಮಾರುತ; ದಕ್ಷಿಣ ಭಾರತದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆ ಸಾಧ್ಯತೆ

ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಬೆಳಗ್ಗಿನಿಂದಲೇ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.