Mysuru Blast Case: ಮೈಸೂರು ಸ್ಪೋಟ; ಹೂವಿನ ವ್ಯಾಪಾರಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು
ಹೀಲಿಯಂ ಸಿಲಿಂಡರ್ ಸ್ಫೋಟದಿಂದ ಮಂಜುಳ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಮಂಜುಳಾ ಸಾವನ್ನಪ್ಪಿದ್ದಾರೆ. ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿ ಪರಮೇಶ್ವರ್ ಸಾವನ್ನಪ್ಪಿದ್ದಾರೆ. ಪರಮೇಶ್ವರ್ ಮೊದಲೇ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.
ಸ್ಫೋಟದಲ್ಲಿ ಮೃತ ಮಂಜುಳಾ -
ಮೈಸೂರು, ಡಿ.27 : ಮೈಸೂರು ಅರಮನೆ (Mysuru Palace) ಮುಂಭಾಗ ಹೀಲಿಯಂ ಸ್ಪೋಟದಿಂದ (Mysuru Blast Case) ಬಲೂನ್ ಮಾರಾಟಗಾರ ಸಲೀಂ ಸೇರಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಹಾಗೂ ಲಕ್ಷ್ಮೀ ಸಹ ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇದೀಗ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಮಂಜುಳಾ ಅವರ ಸಾವಿನ ಸುದ್ದಿ ಕೇಳಿ ಅವರ ಸಹೋದರ ಪರಮೇಶ್ವರ ಅವರು ಕೂಡ ಸಾವನ್ನಪ್ಪಿದ್ದಾರೆ.
ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣ ಪರಮೇಶ್ವರ್ (60) ಸಾವಿಗೀಡಾಗಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟದಿಂದ ಮಂಜುಳ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಮಂಜುಳಾ ಸಾವನ್ನಪ್ಪಿದ್ದಾರೆ. ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿ ಪರಮೇಶ್ವರ್ ಸಾವನ್ನಪ್ಪಿದ್ದಾರೆ. ಪರಮೇಶ್ವರ್ ಮೊದಲೇ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.
ಗುರುವಾರ ರಾತ್ರಿ ಅರಮನೆ ಮುಂದೆ ಬಲೂನ್‌ಗೆ ಗಾಳಿ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಬಲೂನ್ ಮಾರುತ್ತಿದ್ದ ಉತ್ತರ ಪ್ರದೇಶದ ಕನೌಜ್ ಮೂಲದ ವ್ಯಾಪಾರಿ ಸಲೀಂ ಖಮರುದ್ದೀನ್ (40) ಎಂಬಾತ ಮೃತಪಟ್ಟಿದ್ದ. ಈ ವೇಳೆ ಹೂವಿನ ವ್ಯಾಪಾರಿ ಮಂಜುಳಾ, ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಮತ್ತು ರಂಜಿತಾ ಸೇರಿ ಐವರು ಗಾಯಗೊಂಡಿದ್ದರು. ಇವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣಕ್ಕೆ ಎನ್ಐಎ ಎಂಟ್ರಿ, ಅನುಮಾನ ಹೆಚ್ಚಳ
ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ದುರಂತ ಸಂಭವಿಸಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮೃತ ಬಲೂನ್ ವ್ಯಾಪಾರಿ ಸಲೀಂ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರವಾಸಿಗರೊಬ್ಬರ ಹೇಳಿಕೆಯ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.