ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Cauvery River Tragedy: ಕೆ.ಆರ್‌.ನಗರದಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಮೈಸೂರು: ಜಿಲ್ಲೆಯ ಕೆ.ಆರ್‌.ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ದರ್ಗಾಕ್ಕೆ ಭೇಟಿ ನೀಡಲು ಪ್ರವಾಸಿಗರು ಬಂದಿದ್ದ ವೇಳೆ ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.

ಕೆ.ಆರ್‌.ನಗರದ ಅರ್ಕೇಶ್ವರ ದೇವಸ್ಥಾನ.

ಮೈಸೂರು: ಜಿಲ್ಲೆಯ ಕೆ.ಆರ್‌.ನಗರದ (KR Nagar) ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಮುಳುಗಿದ್ದು,ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಯಾಸೀನ್ (23), ಫಾತಿಮ್ (30), ನೇಹಾನ್ (19), ಆಲೀಂ (13), ಹುಮಾಯೂನ್ (7) ಸೇರಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ಮಂತ್ರಾಲಯ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಹಾಸನ : ಕಳೆದ 2 ದಿನಗಳ ಹಿಂದೆ ಮಂತ್ರಾಲಯದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿದೆ. ಎ.16ರಂದು ಬೇಲೂರು ತಾಲೂಕು ಶೆಟ್ಟಿಗೆರೆ ಕುಟುಂಬದ 18 ಮಂದಿ ಮಂತ್ರಾಲಯಕ್ಕೆ ಪಯಣ ಬೆಳೆಸಿದ್ದರು. ಗೂಡ್ಸ್ ಮತ್ತು ಲಾರಿಯ ನಡುವೆ ಸಂಭವಿಸಿದ್ದ ಅಪಘಾತದಿಂದಾಗಿ ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದರು. ಎ.17ರಂದು ಚಿಕಿತ್ಸೆ ಫಲಿಸದೆ ಬಾಲಕಿ ತೇಜಸ್ವಿನಿ (17) ಸಾವನ್ನಪ್ಪಿದ್ದಳು.

ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಜಯಮ್ಮ (65), ಶುಭ (35) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.