ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nandini Milk Parlour: ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!; ಕ್ರಮಕ್ಕೆ ಆಗ್ರಹ

Mysore News: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ರಹಸ್ಯವಾಗಿ ಹಾಲಿನ ಪ್ಯಾಕೆಟ್ ನಡುವೆ ಮದ್ಯದ ಪ್ಯಾಕೆಟ್‌ಗಳನ್ನು ಗ್ರಾಹಕರಿಗೆ ನೀಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಹೀಗಾಗಿ ಅಂಗಡಿ ಮಾಲೀಕನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!

Profile Prabhakara R Jul 1, 2025 1:54 PM

ಮೈಸೂರು: ಜಿಲ್ಲೆಯ ನಂದಿನಿ ಪಾರ್ಲಲ್‌ನಲ್ಲಿ (Nandini milk parlour) ಹಾಲಿನ ಜತೆ ಆಲ್ಕೋಹಾಲ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮದ್ಯ ಮಾರಾಟದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಡಿಯಾಲ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ನಂದಿನಿ ಹಾಲಿನ ಮಳಿಗೆಯಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.

ರೂಟ್ ನಂಬರ್ 126 ಏಜೆನ್ಸಿ ಸಂಖ್ಯೆ 507ರ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ರಹಸ್ಯವಾಗಿ ಹಾಲಿನ ಪ್ಯಾಕೆಟ್ ನಡುವೆ ಮದ್ಯದ ಪ್ಯಾಕೆಟ್‌ಗಳನ್ನು ಗ್ರಾಹಕರಿಗೆ ನೀಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಮುಂಭಾಗವೇ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ವಿಪರ್ಯಾಸ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸುದ್ದಿಯನ್ನೂ ಓದಿ | Physical Abuse: ನಿದ್ದೆ ಬಂತೆಂದು ಹೈವೇಲಿ ಕಾರ್‌ ನಿಲ್ಸಿದ ಡ್ರೈವರ್‌; ನಡುರಾತ್ರಿ ಬಾಲಕಿ ಮೇಲೆ ನಡೀತು ಘನಘೋರ ಕೃತ್ಯ!

ಗ್ರಾಮಸ್ಥರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ವಾತಾವರಣ ಕೆಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಲು ಮಾರಾಟ ಕೇಂದ್ರದಂತಹ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ನಡೆಯುತ್ತಿರುವುದು ಗಂಭೀರ ವಿಚಾರ. ಇದರಿಂದ ಯುವ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರೊಬ್ಬರು ಆರೋಪಿಸಿದ್ದಾರೆ.

ಈ ಬಗ್ಗೆ ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ, ಇದುವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕರ್ನಾಟಕದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳು ಮುಂದುವರಿಯುತ್ತಿರುವುದು ಆಡಳಿತದ ಲೋಪವನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಹುಲಿಗಳ ಸಾವು, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

ಚಾಮರಾಜನಗರ : ಐದು ಹುಲಿಗಳ ಸಾವಿನ (tigers death) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಲೆ ಮಹದೇಶ್ವರ (Male Mahadeshwara hills) ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಹಿತ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಅರಣ್ಯ ಇಲಾಖೆ (forest department) ಆದೇಶಿಸಿದೆ. ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಬಳಿಯ ಅರಣ್ಯದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಐದು ಹುಲಿಗಳು ದಾರುಣವಾಗಿ ಸಾವನ್ನಪ್ಪಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರಂತೆ ಅರಣ್ಯ ಇಲಾಖೆಯು ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಮತ್ತು ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಅರಣ್ಯ ಇಲಾಖೆಯ ಕೇಂದ್ರ ಸ್ಥಾನದಲ್ಲಿರುವ ಹಾಗೂ ಈ ಹಿಂದೆ ಸೇವೆ ಸಲ್ಲಿಸಿದ್ದ ಸಂತೋಷ್ ಕುಮಾರ್ ಜಿ ಅವರಿಗೆ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಳ್ಳುವಂತೆ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಕೊಳ್ಳೇಗಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಸ್ವಪ್ನಿಲ್ ಮನೋಹರ್ ಅಹಿರೆ ಅವರಿಗೆ ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ಮತ್ತು ತರಬೇತಿ ವಲಯ ಅರಣ್ಯಾಧಿಕಾರಿಯಾಗಿರುವ ಉಮಾಪತಿ ಕೆ ಅವರನ್ನು ಹೂಗ್ಯಂ ವಲಯದ ವಲಯ ಅರಣ್ಯಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯಾಧಿಕಾರಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

ಇದನ್ನೂ ಓದಿ: Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

ಹುಲಿಗಳ ಸಾವು ನಡೆದ ಘಟನಾ ಸ್ಥಳದಿಂದ 800 ಮೀಟರ್ ಅಂತರದಲ್ಲಿ ಕಳ್ಳ ಬೇಟೆ ತಡೆ ಶಿಬಿರವಿದ್ದು, ಮುಖ್ಯ ಸಂಚಾರ ರಸ್ತೆಯಿಂದ 100 ಮೀಟರ್ ಅಂತರದಲ್ಲಿ ಹುಲಿಗಳು ಸಾವನ್ನಪ್ಪಿರುವುದು ಹಾಗೂ ಕಳೆದ ಮೂರು ತಿಂಗಳಿಂದ ಹೊರ ಗುತ್ತಿಗೆ ನೌಕರರಿಗೆ ವೇತನ ಪಾವತಿಯಾಗದೇ ಇರುವುದು ಗಮನಿಸಿದರೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವಲಯ ಅರಣ್ಯಾಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಮೂವರು ಅಧಿಕಾರಿಗಳಿಗೆ ಮುಂದಿನ ಆದೇಶತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಿದ್ದಾರೆ.