ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Bank Robbery: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್‌ ದುಡ್ಡಿಗೆ ಕನ್ನ; ಎಟಿಎಂಗೆ ತುಂಬಲು ಕೊಟ್ಟ ಲಕ್ಷ ಲಕ್ಷ ಹಣ ಎಗರಿಸಿದ ಸಿಬ್ಬಂದಿ!

Bank Robbery: ಎಟಿಎಂಗೆ ಹಣ ತುಂಬುವ ಕೆಲಸ ಮಾಡುತ್ತಿದ್ದವನೇ 5.80 ಲಕ್ಷ ರೂ.ಗಳನ್ನು ಲಪಟಾಯಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್‌ ದುಡ್ಡಿಗೆ ಕನ್ನ; ಎಟಿಎಂಗೆ ತುಂಬಲು ಕೊಟ್ಟ ಲಕ್ಷ ಲಕ್ಷ ಹಣ ಎಗರಿಸಿದ ಸಿಬ್ಬಂದಿ!

Profile Prabhakara R Jan 18, 2025 7:45 PM

ಮೈಸೂರು: ಬೀದರ್‌ ಮತ್ತು ಮಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಬ್ಯಾಂಕ್‌ ಹಣ ದರೋಡೆ ಬೆನ್ನಲ್ಲೇ ರಾಜ್ಯದ ಬ್ಯಾಂಕ್‌ನಲ್ಲಿ ಲಕ್ಷಾಂತರ ರೂಪಾಯಿ ದೋಚಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗೆ ಹಣ ತುಂಬುವ ಕೆಲಸ ಮಾಡುತ್ತಿದ್ದವನೇ 5.80 ಲಕ್ಷ ರೂ.ಗಳನ್ನು ಲಪಟಾಯಿಸಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತುರಗನೂರು ಗ್ರಾಮದ ಅಕ್ಷಯ್ ಬಂಧಿತ ಆರೋಪಿ. ಎಟಿಎಂಗೆ ತುಂಬಲು ಕೊಟ್ಟ ಹಣವನ್ನು ಅಕ್ಷಯ್​ ಲಪಟಾಯಿಸಿ ಅದರಿಂದ ಚಿನ್ನಾಭರಣ ಖರೀದಿಸಿದ್ದಾನೆ. ಕಳೆದ‌ ಮೂರು ತಿಂಗಳಿನಿಂದ ಟಿಎಲ್​​ ಎಂಟರ್ ಪ್ರೈಸಸ್‌ನಲ್ಲಿ ಕೆಲಸ ಮಾಡುತ್ತಿದ್ದ ಈತ ಬ್ಯಾಂಕ್‌ನ ಎಟಿಎಂಗಳಿಗೆ ಹಣ ತುಂಬುವ ಕೆಲಸ ಮಾಡುತ್ತಿದ್ದ.

ತನಗೆ ವಹಿಸಿದ ಕೆಲಸವನ್ನು ಅಕ್ಷಯ್ ಸಮರ್ಪಕವಾಗಿ ಮಾಡುತ್ತಿದ್ದ. ಆದರೆ, ಸಂಸ್ಥೆ ಆಡಿಟ್ ಮಾಡಿಸಿದಾಗ ಅಕ್ಷಯ್ ಬಂಡವಾಳ ಬಯಲಾಗಿದೆ. ಆಡಿಟ್ ವೇಳೆ ಸುಮಾರು 5 ಲಕ್ಷಕ್ಕೂ ಹೆಚ್ಚು ಹಣದ ವ್ಯತ್ಯಾಸ ಬಂದಿದೆ. ಈ ಬಗ್ಗೆ ಪರಿಶೀಲನೆ ಮಾಡಿದಾಗ ಅಕ್ಷಯ್ ಗದ್ದಿಗೆ ಗ್ರಾಮದ ಬಳಿಯ ಎಟಿಎಂಗೆ ಹಣ ಹಾಕದೆ 5.80 ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಆತ ಹಣ ತೆಗೆದುಕೊಂಡು ಹೋದ ವಿಡಿಯೊ ಎಟಿಎಂನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಕೃತ್ಯಕ್ಕೆ ಆತನಿಗೆ ತೇಜಸ್ವಿನಿ‌ ಎಂಬಾಕೆ ಸಹಕರಿಸಿದ್ದಾಳೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಇಬ್ಬರು ಸೇರಿ ಈ ಹಣದಿಂದ ಚಿನ್ನ ಖರೀದಿಸಿದ್ದಾರೆ. ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆ ಇಬ್ಬರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಎಫ್ಐಆರ್ ದಾಖಲಾಗುತ್ತಲೇ ಅಕ್ಷಯ್ ತಲೆಮರೆಸಿಕೊಂಡಿದ್ದ. ಆದರೆ, ನೆನ್ನೆ ರಾತ್ರಿ ಅಕ್ಷಯ್ ತುರುಗನೂರು ಗ್ರಾಮದ ಪಕ್ಕದಲ್ಲಿ ಸ್ನೇಹಿತರ ಜತೆ ಪಾರ್ಟಿ ಮಾಡುತ್ತಿರುವ ವಿಚಾರ ಪೊಲೀಸರಿಗೆ ಗೊತ್ತಾಗಿದೆ. ತಕ್ಷಣ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ತೆರಳಿ ಅಕ್ಷಯ್‌ನನ್ನು ಬಂಧಿಸಲಾಗಿದೆ. ಈ ವೇಳೆ ಅಲ್ಲಿ ಹೈಡ್ರಾಮವೇ ನಡೆದಿದೆ.

ಅಕ್ಷಯ್ ನನ್ನು ವಶಕ್ಕೆ ಪಡೆಯಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಅಕ್ಷಯ್ ಹಾಗೂ ಅವರ ಸ್ನೇಹಿತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಕೊನೆಗೂ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಅಕ್ಷಯನನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Child Marriage: ಸಾಲ ವಾಪಸ್ ಕೊಡದ್ದಕ್ಕೆ 17 ವರ್ಷದ ಬಾಲಕಿಯನ್ನು ಅಪಹರಿಸಿ ಮದುವೆಯಾದ ಭೂಪ!

ಬೆಂಗಳೂರಿನಲ್ಲಿ ರೌಡಿಶೀಟರ್‌ನ ಗುಂಡಿಕ್ಕಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ

ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ರೌಡಿಶೀಟರ್‌ (Rowdysheeter) ಒಬ್ಬನನ್ನು ಗುಂಡಿಕ್ಕಿ ಕೊಲೆ (Murder Case) ಮಾಡಿ, ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ತಮಿಳುನಾಡಿಗೆ ಸಾಗಿಸಿ ಎಸೆದ (Bengaluru Crime news) ಪ್ರಕರಣ ವರದಿಯಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಕೊತ್ತನೂರು ಗುಣ (30) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಇತರ ರೌಡಿಶೀಟರ್‌ಗಳೇ ಕೊಂದಿದ್ದಾರೆ. ಮೊದಲು ಅಪಾರ್ಟ್ಮೆಂಟ್ ಒಂದಕ್ಕೆ ಮಾತುಕತೆಗೆ ಕರೆಸಿಕೊಂಡಿದ್ದಾರೆ. ಬಳಿಕ ಅಲ್ಲಿ ರೌಡಿಶೀಟರ್ ಮತ್ತು ಅವರ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದಾಗ ದುಷ್ಕರ್ಮಿಗಳು ಗುಣನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.10ರಂದು ಕೊತ್ತನೂರಿನ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್ ನಿವಾಸಿ ಬ್ರಿಜೇಶ್ ಎಂಬಾತ ರೌಡಿ ಗುಣನನ್ನು ಅಪಾರ್ಟ್‌ಮೆಂಟ್ ಗೆ ಕರೆಸಿಕೊಂಡು ಬಳಿಕ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಲೆಯಾದ ಗುಣನ ಮೃತದೇಹ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಮೃತ ಗುಣನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಬ್ರಿಜೇಶ್ ಸೇರಿ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೌಡಿ ಶೀಟರ್ ಗುಣ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕೊತ್ತನೂರಿನಲ್ಲಿ ನೆಲೆಸಿದ್ದ. ಗುಣ ನಾಯಿ ಸಾಕಿ ಮಾರಾಟ ಮಾಡುತ್ತಿದ್ದ. ಜ.10ರಂದು ಮಧ್ಯಾಹ್ನ ಕೆಲಸ ಇದೆ ಎಂದು ಮನೆಯಲ್ಲಿ ಹೇಳಿ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ಗೆ ತೆರಳಿದ್ದ. ಗುಣ ಜತೆಗೆ ತೆರಳಿದ್ದ ಚಂದ್ರು ಎಂಬಾತ ಅಪಾಟ್ಮೆಂಟ್‌ನ ಪಾರ್ಕಿಂಗ್ ಸ್ಥಳದಲ್ಲೇ ಕಾದು ನಿಂತಿದ್ದಾನೆ. ಎಷ್ಟು ಹೊತ್ತು ಕಳೆದರೂ ಗುಣ ವಾಪಾಸ್ ಬಾರದಿದ್ದರಿಂದ ಆತನ ಮೊಬೈಲ್‌ಗೆ ಕರೆ ಮಾಡಿದಾಗ, ಅಪರಿಚಿತ ವ್ಯಕ್ತಿ ಕರೆ ಸ್ವೀಕರಿಸಿ ಪ್ರಕರಣವೊಂದರ ಸಂಬಂಧ ವಿಚಾರಣೆಗಾಗಿ ಗುಣನನ್ನು ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದಿದ್ದಾನೆ.

ಈ ಸುದ್ದಿಯನ್ನೂ ಓದಿ | Animal Cruelty: ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿದ ದುರುಳರು

ಬಳಿಕ ಚಂದ್ರು ವಾಪಾಸ್ ಆಗಿದ್ದಾನೆ. ಸಂಜೆಯಾದರೂ ಮನೆಗೆ ಪತಿ ಗುಣ ವಾಪಾಸ್ ಆಗಾದ ಹಿನ್ನೆಲೆಯಲ್ಲಿ ಪತ್ನಿ ಬಾಗಲೂರು ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ, ಅಪಾರ್ಟ್‌ಮೆಂಟ್ ನಿವಾಸಿ ಬ್ರಿಜೇಶ್ ಹಾಗೂ ಮತ್ತೊಬ್ಬ ಅಂದು ಮೃತದೇಹವೊಂದನ್ನು ಬೆಡ್‌ಶಿಟ್‌ನಲ್ಲಿ ಸುತ್ತಿಕೊಂಡು ಲಿಫ್ಟ್ ನಲ್ಲಿ ಹೊರಗೆ ಸಾಗಿಸಿದ್ದುದು ಕಂಡು ಬಂದಿದೆ.