ಮೈಸೂರು: ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು (Mysore News) ನಿರುಪಾಲಾಗಿರುವ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬಡಗಲಹುಂಡಿಯಲ್ಲಿ ಈ ಒಂದು ದುರಂತ ಸಂಭವಿಸಿದ್ದು, ವರುಣ ನಾಲೆ ನೀರಿನಲ್ಲಿ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ನಂದನ್ (25) ಮತ್ತು ರಾಕೇಶ್ (20) ಎಂದು ಗುರುತಿಸಲಾಗಿದೆ.
ಇಬ್ಬರು ಸಹೋದರರು, ವರುಣ ನಾಲೆಯಲ್ಲಿ ಬಾಲಕನನ್ನು ಕಾಪಾಡಕ್ಕೆ ಹೋಗಿದ್ದಾರೆ. ಆದರೆ ಇಬ್ಬರೂ ನೀರು ಪಾಲಾಗಿದ್ದಾರೆ. 15 ದಿನಗಳ ಹಿಂದೆ ಅಷ್ಟೇ ನಂದನ್ ಪ್ರೀತಿಸಿದ ಯುವತಿಯ ಜೊತೆಗೆ ಮದುವೆಯಾಗಿದ್ದ. ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರಿನಲ್ಲಿ ಮುನೇಶ್ವರ ದೇವಸ್ಥಾನದ ಅರ್ಚಕರೊಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದಿಂದ ಅರ್ಚಕರು ಬಳಲುತ್ತಿದ್ದು ಇದರಿಂದ ಬೇಸತ್ತು ಅಶ್ವಥ್ ನಾರಾಯಣ (54) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: Engineer Self Harming: ಸರಣಿ ಆತ್ಮಹತ್ಯೆಗೆ ಮತ್ತೊಂದು ಸೇರ್ಪಡೆ; ಗದಗದಲ್ಲಿ ಇಂಜಿನಿಯರ್ ಆತ್ಮಹತ್ಯೆ
ನೆಲಮಂಗಲದ ನಿವಾಸಿ ಎಂದು ಹೇಳಲಾಗುತ್ತಿದ್ದು, ಅಶ್ವಥ್ ನಾರಾಯಣ್ ಫ್ಯಾಕ್ಟರಿ ಕೆಲಸ ಜೊತೆಗೆ ಮುನೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಅಶ್ವಥ್ ನಾರಾಯಣ ಮೂರ್ತಿ ಹವನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಶವ ಶಿಫ್ಟ್ ಮಾಡಲಾಗಿದೆ.