ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರಿಮಿನಲ್ ಸಂಚಿನಿಂದ ಶೃಂಗೇರಿಯಲ್ಲಿ ಬಿಜೆಪಿಗೆ ಗೆಲುವು; ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ

CM Siddaramaiah: ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಅವರು ತಿಳಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ.

ಮೈಸೂರು, ಮೇ 6: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.

ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು

ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.‌

ಶೃಂಗೇರಿ ಕ್ಷೇತ್ರದ ಮರುಎಣಿಕೆ: ಕಾನೂನು ಹೋರಾಟ ಮಾಡುತ್ತೇವೆ ಎಂದ ಡಿ.ಕೆ. ಶಿವಕುಮಾರ್

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯ ಸರ್ಕಾರ ಇದರಲ್ಲಿ ಮಧ್ಯ ಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.