ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mysuru Unity Mall: ಯದುವೀರ್‌ ಚಾಲನೆ ಕೊಟ್ಟ ಯೂನಿಟಿ ಮಾಲ್ ಕಾಮಗಾರಿಗೆ ತಾಯಿಯಿಂದಲೇ ತಡೆಯಾಜ್ಞೆ!

ಮೈಸೂರಿನ ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದ 6.5 ಎಕರೆ ಪ್ರದೇಶದಲ್ಲಿ ‘ಯೂನಿಟಿ ಮಾಲ್‘ ನಿರ್ಮಾಣಕ್ಕೆ ಜು. 27ರಂದು ಸಂಸದ ಯದುವೀರ್ ಭೂಮಿ ಪೂಜೆ ನೇರವೇರಿಸಿದ್ದರು. ಆದರೆ, ಈ ಕಾಮಗಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಇದೀಗ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಯದುವೀರ್‌ ಚಾಲನೆ ಕೊಟ್ಟ ಕಾಮಗಾರಿಗೆ ತಾಯಿಯಿಂದಲೇ ತಡೆಯಾಜ್ಞೆ!

ಸಂಸದ ಯದುವೀರ್ ಒಡೆಯರ್ ಮತ್ತು ಪ್ರಮೋದಾದೇವಿ ಒಡೆಯರ್ -

Prabhakara R
Prabhakara R Dec 10, 2025 7:12 PM

ಮೈಸೂರು, ಡಿ.10: ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ನಗರದ ವಸ್ತು ಪ್ರದರ್ಶನ ಆವರಣದಲ್ಲಿ ನಿರ್ಮಿಸುತ್ತಿರುವ ʻಯೂನಿಟಿ ಮಾಲ್ʼ (Mysuru Unity Mall) ಕಾಮಕಾರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಇದಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ ಈ ಕಾರ್ಯಕ್ಕೆ ಯದುವೀರ್ ಅವರ ತಾಯಿ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಅವರೇ ಇದೀಗ ತಡೆಯಾಜ್ಞೆ ತಂದಿರುವುದು ಕಂಡುಬಂದಿದೆ.

ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ ನಂ.1ರ 6.5 ಎಕರೆ ಪ್ರದೇಶದಲ್ಲಿ ‘ಯೂನಿಟಿ ಮಾಲ್‘ ನಿರ್ಮಾಣಕ್ಕೆ ಜು. 27ರಂದು ಸಂಸದ ಯದುವೀರ್ ಭೂಮಿ ಪೂಜೆ ನೇರವೇರಿಸಿದ್ದರು. ಆದರೆ, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯ ಈಗ ಈ ಜಾಗದಲ್ಲಿ ಯಾವುದೇ ನಿರ್ಮಾಣ ಕಾರ್ಯ ನಡೆಸದಂತೆ ಹಾಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.

“ಸ್ವಸ್ಥ ಮೈಸೂರು” ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿದ ಆರೋಗ್ಯ ಸಚಿವ

ಪಿಪಿಪಿ ಮಾದರಿಯಲ್ಲಿ ಒಟ್ಟು 193 ಕೋಟಿ ರೂ. ವೆಚ್ಚದಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ದೇಶದ ವಿವಿಧ ರಾಜ್ಯಗಳ ಒಟ್ಟು 36 ವಾಣಿಜ್ಯ ಮಳಿಗೆಗಳನ್ನು ಈ ಕಟ್ಟಡದಲ್ಲಿ ಪ್ರಾರಂಭಿಸಿಲು ಉದ್ದೇಶಿಸಲಾಗಿತ್ತು. ಜತೆಗೆ ಅತಿಥೇಯ ರಾಜ್ಯ ಕರ್ನಾಟಕದ ಪ್ರತಿ ಜಿಲ್ಲೆಗೂ ಒಂದು ಮಳಿಗೆ ಪ್ರಾರಂಭಿಸಲು ಅವಕಾಶ ಕಲ್ಪಿಸುವ ಚಿಂತನೆ ಇತ್ತು. ಆ ಮೂಲಕ ಆಯಾ ರಾಜ್ಯಗಳ ದೇಶೀಯ ಕರಕುಶಲ ಉತ್ಪನ್ನಗಳ ಮಾರಾಟಕ್ಕೆ ಹಾಗೂ ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಯೋಜನೆಯ ಉದ್ದೇಶ ಆಗಿತ್ತು. ಆದರೆ, ಮಗ ಚಾಲನೆ ನೀಡಿದ್ದ ಕಾಮಗಾರಿಗೆ ಈಗ ತಾಯಿಯೇ ತಡೆಯಾಜ್ಞೆ ತಂದಿದ್ದಾರೆ.

5.75 ಕೋಟಿ ರೂ. ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟದ ಅಭಿವೃದ್ಧಿ

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಸರ್ಕಾರದ ಪರಿಶೀಲನೆಯಲ್ಲಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ದೇವಾಲಯದ ಸುತ್ತ 1 ಕೋಟಿ ರೂ. ವೆಚ್ಚದಲ್ಲಿ ನೆಲಹಾಸು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಬೆಟ್ಟದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ನಂದಿ ಬೆಟ್ಟದಲ್ಲಿನ ಮಾದರಿಯಲ್ಲಿ ವೀಕ್ಷಣಾ ಗೋಪುರಗಳು, ದಾಸೋಹ, ಅಡುಗೆ ಮನೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ 5.75 ಕೋಟಿ ರೂ. ವೆಚ್ಚದ ವಿವರವಾದ ಪರಿಕಲ್ಪನಾ ವರದಿಗೆ ಅನುಮೋದನೆ ನೀಡಿ, ಅಗತ್ಯ ಅನುದಾನ ನೀಡುವ ಕಾರ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಅವರು ಬೆಳಗಾವಿ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಉತ್ತರ ನೀಡಿದ್ದು, ಬಿಳಿಗಿರಿ ರಂಗನಾಥ ದೇವಾಲಯ ಬಳಿ ಮೆಟ್ಟಿಲು ಹಾಗೂ ರೈಲಿಂಗ್ಸ್ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಿ, ಕಲ್ಯಾಣಿ ರಸ್ತೆ, ರಥದ ಬೀದಿ ಕಾಂಕ್ರಿಟ್ ರಸ್ತೆ ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ 1.05 ಕೋಟಿ ರೂ. ವೆಚ್ಚವಾಗಿದ್ದು, ದೇವಸ್ಥಾನದ ಪಾದುಕೆಯಿಂದ ರಾಜಗೋಪುರಕ್ಕೆ ಕಾಲಗಳೊಂದಿಗೆ ಮೆಟ್ಟಿಲುಗಳ ವಿನ್ಯಾಸ ಪಡೆಯಲಾಗಿದೆ.

ಮೈಸೂರು ವೃತ್ತದ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರು ಹಾಗೂ ಕಾರ್ಯಪಾಲಕ ಅಭಿಯಂತರರು, ಕಾಮಗಾರಿ ಕುರಿತು ಪರಿವೀಕ್ಷಣೆ ನಡೆಸಿದ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಪಾಕೆಟ್ ರಾಕ್ಸ್ ಕಂಡುಬಂದ ಕಾರಣ ಬದಲಿ ಅಲೈನ್‌ಮೆಂಟ್ ಪರಿಶೀಲಿಸಿ, ಮರುವಿನ್ಯಾಸ ಪಡೆದು, ನಂತರವೇ ಕಾಮಗಾರಿ ನಿರ್ವಹಿಸಲು ನಿರ್ದೇಶನ ನೀಡಿರುತ್ತಾರೆ. ಹೀಗಾಗಿ ಬದಲಿ ಅಲೈನ್‌ಮೆಂಟ್ ಮರುವಿನ್ಯಾಸದ ಅಂದಾಜು ಪಟ್ಟಿ ತಯಾರಿಸಿದ್ದು, ಇದನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆಗಮಿಕರೊಂದಿಗೆ ಚರ್ಚಿಸಿ, ಬಳಿಕವೇ ಉಳಿದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪ್ರವಾಸೋದ್ಯಮ ಇಲಾಖೆ ಆಯುಕ್ತರು ವರದಿ ಸಲ್ಲಿಸಿದ್ದಾರೆ.

ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿ: ಎಂ.ಬಿ.ಪಾಟೀಲ್

ಈ ವರದಿಯ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ, ಶೀಘ್ರವೇ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಿಳಿಗಿರಿ ರಂಗನಬೆಟ್ಟದ ಮೆಟ್ಟಿಲು ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.