ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣದ ಸಾವಿನ ಸಂಖ್ಯೆ 2ಕ್ಕೇರಿಕೆ; ಗಾಯಾಳು ಮಂಜುಳಾ ಸಾವು

ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್​​ ಸಿಲಿಂಡರ್​ ಸ್ಫೋಟವಾಗಿ ಬಲೂನ್‌ ಮಾರುತ್ತಿದ್ದ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ವ್ಯಾಪಾರಿ ಸಲೀಂ ಖಮರುದ್ದೀನ್ (40) ಎಂಬಾತ ಮೃತಪಟ್ಟಿದ್ದ. ಇದೀಗ ಗಾಯಾಳು ಮಂಜುಳಾ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತ ಹೂವಿನ ವ್ಯಾಪಾರಿ ಮಂಜುಳ.

ಮೈಸೂರು: ನಗರದ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟದ ವೇಳೆ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಎಂಬುವವರು ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿದೆ. ಗುರುವಾರ ರಾತ್ರಿ ಅರಮನೆ ಮುಂದೆ ಬಲೂನ್‌ಗೆ ಗಾಳಿ ತುಂಬುವ ಹೀಲಿಯಂ ಗ್ಯಾಸ್​​ ಸಿಲಿಂಡರ್​ ಸ್ಫೋಟವಾಗಿ ಬಲೂನ್‌ ಮಾರುತ್ತಿದ್ದ ಉತ್ತರ ಪ್ರದೇಶದ ಕನೌಜ್ ಮೂಲದ ವ್ಯಾಪಾರಿ ಸಲೀಂ ಖಮರುದ್ದೀನ್ (40) ಎಂಬಾತ ಮೃತಪಟ್ಟಿದ್ದ.

ಪ್ರಕರಣದಲ್ಲಿ ಹೂವಿನ ವ್ಯಾಪಾರಿ ಮಂಜುಳಾ, ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತಾದ ಶಮಿನಾ ಶಬಿಲ್‌, ರಾಣೆಬೆನ್ನೂರಿನ ಕೊಟ್ರೇಶ್‌ ಮತ್ತು ರಂಜಿತಾ ಸೇರಿ ಐವರು ಗಾಯಗೊಂಡಿದ್ದರು. ಇವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಗಾಯಾಳು ಮಹಿಳೆ ಮಂಜುಳಾ ಮೃತಪಟ್ಟಿದ್ದಾರೆ.

ಬಲೂನ್​ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್​ ಸ್ಫೋಟಗೊಂಡಿದ್ದರಿಂದ ದುರಂತ ಸಂಭವಿಸಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ನಡೆದ ಸ್ಫೋಟದಿಂದ ಆತಂಕಕರ ವಾತಾವರಣ ನಿರ್ಮಾಣವಾಗಿತ್ತು.

ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಮೃತ ಬಲೂನ್ ವ್ಯಾಪಾರಿ ಸಲೀಂ ವಿರುದ್ಧ ಎಫ್‌ಐಆರ್‌

ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮೃತ ಬಲೂನ್ ವ್ಯಾಪಾರಿ ಸಲೀಂ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರವಾಸಿಗರೊಬ್ಬರ ಹೇಳಿಕೆಯ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಫೋಟದಲ್ಲಿ ರಾಣೆಬೆನ್ನೂರು ಮೂಲದ ಕೊಟ್ರೇಶ್ ಬೀರಪ್ಪ ಗಾಯಗೊಂಡಿದ್ದರು. ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬದೊಂದಿಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ಕೊಟ್ರೇಶ್‌, ತಮ್ಮ ಮಕ್ಕಳಿಗೆ ಬಲೂನ್ ಕೊಡಿಸಲು ಬಂದಿದ್ದ ವೇಳೆ, ಬಲೂನ್ ವ್ಯಾಪಾರಿ ಸಲೀಂ ಸೈಕಲ್ ಮೇಲೆ ಸಿಲಿಂಡರ್ ಇಟ್ಟುಕೊಂಡು ಬಲೂನ್‌ಗೆ ಗಾಳಿ ತುಂಬಿಸುತ್ತಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಕೊಟ್ರೇಶ್ ಬೀರಪ್ಪ ಅವರ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ, ಸ್ಥಳದಲ್ಲಿದ್ದ ಲಕ್ಷ್ಮೀ, ಮಂಜುಳಾ ಹಾಗೂ ಶಹೀನಾ ಶಬ್ಬೀರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು.