ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಚಾಮುಂಡಿ ಬೆಟ್ಟಕ್ಕೆ ಭೇಟಿ; ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

DK Shivakumar: ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

Profile Prabhakara R Jul 4, 2025 6:17 PM

ಮೈಸೂರು, ಜು.04: “ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು. ಅವರು ನಮಗೆ ಬುದ್ಧಿವಾದ ಹೇಳಿದ್ದಾರೆ, ಸಂದೇಶ ನೀಡಿದ್ದಾರೆ. ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ದೇವಿಯ ದರ್ಶನ ಪಡೆದ ನಂತರ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿಎಂ ರೇಸ್‌ನಿಂದ ನೀವು ಹೊರಬಿದ್ದಿದ್ದೀರಾ ಎಂದು ಪ್ರಶ್ನಿಸಿದಾಗ, “ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಬಂದಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಂದಿದ್ದೇನೆ” ಎಂದು ತಿಳಿಸಿದರು.

“ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ” ಎಂದರು.

DK Shivakumar (45)

ನಿಮ್ಮ ಪ್ರಾರ್ಥನೆಗೆ ಭಗವಂತ ಫಲ ನೀಡುವ ದಿನಗಳು ಹತ್ತಿರ ಬಂದಿವೆಯೇ ಎಂದು ಕೇಳಿದಾಗ, “ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ” ಎಂದು ಮಾರ್ಮಿಕವಾಗಿ ನುಡಿದರು.

“ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ಈ ವರ್ಷ ನಾಡದೇವಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿದೆ. ಈ ವರ್ಷ ಉತ್ತಮ ಮಳೆ, ನೆಮ್ಮದಿ, ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಎನ್ನುವುದು ನನ್ನ ನಂಬಿಕೆ” ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Laxmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ, ಪಾರದರ್ಶಕವಾಗಲು ಕ್ರಮ ಕೈಗೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಕಾಂಗ್ರೆಸ್ ಸರ್ಕಾರದಿಂದ ಆಶಾಕಿರಣ ಯೋಜನೆ ಮೂಲಕ ʼದೃಷ್ಟಿ ಗ್ಯಾರಂಟಿʼ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼ ಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು. ಗೋವಿಂದರಾಜನಗರದ ಎಂ.ಸಿ. ಲೇಔಟ್‌ನಲ್ಲಿ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ʼಆಶಾಕಿರಣ ದೃಷ್ಟಿ ಕೇಂದ್ರʼ ವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಯೋಜನೆಯ ಲಾಭ ಪಡೆದವರಿಗೆ ಉಚಿತ ಕನ್ನಡಕಗಳನ್ನು ವಿತರಣೆ ಮಾಡಿದರು.

ರಾಜ್ಯದಾದ್ಯಂತ 393 ಕಡೆ ಆಶಾಕಿರಣ ದೃಷ್ಟಿ ಕೇಂದ್ರಗಳ ಉದ್ಘಾಟನೆಯಾಗುತ್ತಿದೆ. ಉಚಿತವಾಗಿ ಕನ್ನಡಕ ನೀಡಲಾಗುತ್ತಿದೆ. ಜನರಿಗೆ ಇದರಿಂದ ಕನ್ನಡಕ ಸೇರಿದಂತೆ ಚಿಕಿತ್ಸೆಯ ಸಾವಿರಾರು ಮೊತ್ತ ಹಣ ಉಳಿಯುತ್ತದೆ. ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇವರು ಆರೋಗ್ಯ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಕ್ರಾಂತಿಕಾರಕ ಹಾಗೂ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಹಿಂದಿನಿಂದಲೂ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್ ಸರ್ಕಾರ. ಕರ್ನಾಟಕದಲ್ಲಿ 70 ವೈದ್ಯಕೀಯ ಕಾಲೇಜುಗಳಿವೆ. ಅತ್ಯಂತ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿರುವ ಪಟ್ಟಿಯಲ್ಲಿ ಕರ್ನಾಟಕವಿದ್ದು. ಇಲ್ಲಿ ಕಲಿತವರು ಹೊರ ದೇಶಗಳಿಗೆ ತೆರಳಿ ದೇಶಕ್ಕೆ ಉತ್ತಮ ಹೆಸರು ತರುತ್ತಿದ್ದಾರೆ ಎಂದು ತಿಳಿಸಿದರ

ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ʼಯಶಸ್ವಿನಿʼ ಯೋಜನೆ ಮೂಲಕ ರೈತರ, ಬಡವರ ಆರೋಗ್ಯ ಕಾಳಜಿಗೆ ಮುನ್ನುಡಿ ಬರೆದಿದ್ದು ನಮ್ಮ ಸರ್ಕಾರ. ಇದನ್ನು ನೋಡಿದ ಕೇಂದ್ರ ಸರ್ಕಾರ ಆರೋಗ್ಯ ಯೋಜನೆಗಳನ್ನು ಪ್ರಾರಂಭ ಮಾಡಿತು. ನಮ್ಮದು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಗ್ಯಾರಂಟಿ ಸರ್ಕಾರ. ಐದು ಗ್ಯಾರಂಟಿಗಳ ಜತೆಗೆ ಭೂಮಿ ಗ್ಯಾರಂಟಿಯನ್ನು ಸರ್ಕಾರಕ್ಕೆ ಎರಡು ವರ್ಷ ತುಂಬಿದ ಘಳಿಗೆಯಲ್ಲಿ ನಮ್ಮ ಜನತೆಗೆ ನೀಡಿದ್ದೇವೆ ಎಂದರು.

ಶೇ.25ರಷ್ಟು ಶುಲ್ಕ ಪಡೆದು ಎಂಆರ್‌ಐ, ಸಿಟಿ ಸ್ಕ್ಯಾನ್ ಸೇವೆ

ಗೋವಿಂದರಾಜನಗರ ಕ್ಷೇತ್ರದಲ್ಲಿರುವ ಬಿಬಿಎಂಪಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹೊಸ ರೂಪ ನೀಡಬೇಕು ಎಂದು ಕ್ಷೇತ್ರದ ಶಾಸಕರಾದ ಪ್ರಿಯಕೃಷ್ಣ ಸರ್ಕಾರದ ಮೇಲೆ ಒತ್ತಡ ತಂದು ಕೆಲಸ ಮಾಡುತ್ತಿದ್ದಾರೆ. ವಿವಿಧ ವಿಭಾಗಗಳನ್ನು ಈ ಆಸ್ಪತ್ರೆಯಲ್ಲಿ ತೆರೆದು ಜನಸೇವೆ ಮಾಡಲಾಗುತ್ತಿದೆ. ಮಾರುಕಟ್ಟೆ ದರದ ಶೇ.25 ರಷ್ಟು ಮಾತ್ರ ಹಣ ತೆಗೆದುಕೊಂಡು. ಎಂಆರ್‌ಐ, ಸಿಟಿ ಸ್ಕ್ಯಾನ್ ಸೇವೆ ನೀಡುವ ಆಲೋಚನೆಯೂ ಇದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | IBPS Recruitment 2025: 6,215 ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ರಾಜ್ಯದ ಜನಸಂಖ್ಯೆ 7 ಕೋಟಿಯಿದೆ. 2421 ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಜ್ಯದಾದ್ಯಂತ ಕಾರ್ಯನಿರ್ವಹಣೆ ಮಾಡುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮೂಲಕವು ಇದಕ್ಕೆ ಆದ್ಯತೆ ನೀಡಲಾಗುವುದು. ಬೆಂಗಳೂರು ಆರ್ಯುವೇದ ಆಸ್ಪತ್ರೆಗೆ ಹೊಸರೂಪ ನೀಡಲು ಸಚಿವರ ಜತೆ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.