ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mysuru News: ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ; ಕೇಸ್‌ ದಾಖಲು

ಮೈಸೂರು ತಾಲೂಕು ಗುಡಮಾದನಹಳ್ಳಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಿ, ಭೂ ಸ್ವಾಧೀನ ಪ್ರಕ್ರಿಯೆಗೆ ಗ್ರಾಮ ಆಡಳಿತ ಅಧಿಕಾರಿ ಜಿ.ಭವ್ಯ ಅವರು ತೆರಳಿದ್ದಾಗ, ಅವರ ಕರ್ತವ್ಯಕ್ಕೆ ವ್ಯಕ್ತಿಯೊಬ್ಬರು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ಭವ್ಯ ಮತ್ತು ಆರೋಪಿ ಜಿಎಂ ಪುಟ್ಟಸ್ವಾಮಿ

ಮೈಸೂರು: ಶಿಡ್ಲಘಟ್ಟ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವುದು ಕಂಡುಬಂದಿದೆ. ಮೈಸೂರು ತಾಲೂಕು ಗುಡಮಾದನಹಳ್ಳಿಯಲ್ಲಿ ಘಟನೆ (Mysuru News) ನಡೆದಿದೆ. ಜಿಎಂ ಪುಟ್ಟಸ್ವಾಮಿ ಎಂಬಾತ ಗ್ರಾಮ ಆಡಳಿತಾಧಿಕಾರಿಗೆ ಬೆದರಿಕೆ ಹಾಕಿದ್ದು, ಈ ಸಂಬಂಧ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ.ಭವ್ಯ, ಗ್ರಾಮ ಸಹಾಯಕ ನವೀನ್ ಕುಮಾರ್‌ ಅವರಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ‌. ಕೊಲೆ ಬೆದರಿಕೆ ಹಾಕಿದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ ಮಾಡಲು ಒಟ್ಟು 20 ಎಕರೆ ಸರ್ಕಾರಿ ಜಾಗ ಮೀಸಲಿಡಲಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿದೆ. ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ.

ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಿ, ಭೂ ಸ್ವಾಧೀನ ಪ್ರಕ್ರಿಯೆಗೆ ಮಹಿಳಾ ಅಧಿಕಾರಿ ಜಿ.ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು. ಈ ವೇಳೆ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ, ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು, ನಿನ್ನನ್ನ ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಪುಟ್ಟಸ್ವಾಮಿಯ ದೌರ್ಜನ್ಯ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಗ್ರಾಮ ಸಹಾಯಕ ನವೀನ್ ಕುಮಾರ್‌ಗೂ ಬೆದರಿಕೆ ಹಾಕಿ, ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾನೆ. ಸರ್ಕಾರಿ ಕೆಲಸವನ್ನು ನಿರ್ಭಯವಾಗಿ ನಿರ್ವಹಿಸಲು ಮಹಿಳಾ ಸಿಬ್ಬಂದಿಯಾದ ನನಗೆ ಭಯದ ವಾತಾವರಣ ಉಂಟು ಮಾಡಿರುವ ಪುಟ್ಟಸ್ವಾಮಿ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಭವ್ಯ ಅವರು ದೂರು ನೀಡಿದ್ದಾರೆ. ಅದರಂತೆ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hangal News: ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡರೊಬ್ಬರು ಧಮ್ಕಿ ಹಾಕಿದ ಘಟನೆ ನಡೆದಿತ್ತು. ಈ ಘಟನೆಗೆ ನಗರಸಭೆಯ ಸಿಬ್ಬಂದಿ ಮತ್ತು ನೌಕರರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಕೈ ಮುಖಂಡ ರಾಜೀವ್‌ ಗೌಡ ವಿರುದ್ಧ ಪೌರಾಯುಕ್ತೆ ಅಮೃತಾಗೌಡ ದೂರು ನೀಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ಬಂದಿದೆ.