Food Poison: ಹೊಸ ವರ್ಷದ ಕೇಕ್ ತಿಂದು 30 ವಿದ್ಯಾರ್ಥಿಗಳು ಅಸ್ವಸ್ಥ
Food Poison: ಹೊಸ ವರ್ಷದ ಕೇಕ್ ತಿಂದು 30 ವಿದ್ಯಾರ್ಥಿಗಳು ಅಸ್ವಸ್ಥ
ಹರೀಶ್ ಕೇರ
January 4, 2025
ಮೈಸೂರು : ಹೊಸ ವರ್ಷದ ಕೇಕ್ (New Year Cake) ತಿಂದು 30ಕ್ಕೂ ಹೆಚ್ಚು ಮಕ್ಕಳು (food Poison) ಅಸ್ವಸ್ಥರಾಗಿರುವ ಘಟನೆ ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಬೋಳನಹಳ್ಳಿಯಲ್ಲಿ ನಡೆದಿದೆ.
ಬೋಳನಹಳ್ಳಿ ಗ್ರಾಮದ ಶ್ರೀಮಂಜುನಾಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೇಕ್ ತಿಂದ ಪರಿಣಾಮ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಬೋಳನಹಳ್ಳಿ ಆಯುಷ್ಮಾನ್ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸ ವರ್ಷದ ದಿನ ಕೇಕ್ ಕಟ್ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ಎರಡು ದಿನಗಳ ಬಳಿಕ ಉಳಿದ ಕೇಕ್ ತಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅಪಾಯದಿಂದ ಎಲ್ಲಾ ವಿದ್ಯಾರ್ಥಿಗಳು ಪಾರಾಗಿದ್ದಾರೆ.