ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು

ಟಿ. ನರಸೀಪುರದಲ್ಲಿ ಗಣೇಶೋತ್ಸವ ವಿವಾದದ ಕಿಚ್ಚು ಹೆಚ್ಚಾಗಿದ್ದು, , ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆಯನ್ನು ಮಾಡಿದೆ. ಅಲ್ಲದೇ, ಸೆಪ್ಟೆಂಬರ್ 18 ರಂದು ಲಿಂಕ್ ರಸ್ತೆಯಲ್ಲಿ ಹಿಂದೂ ಶೋಭಾ ಯಾತ್ರೆ ನಡೆಸಲು ಹಿಂದೂ ಪರ ಸಂಘಟನೆ ನಿರ್ಧರಿಸಿದೆ.

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 15, 2026 12:14 PM

ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ವಿವಾದದ ಕಿಚ್ಚು ಹೆಚ್ಚಾಗಿದ್ದು, , ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಹಿಂದೂ (T. Narasipura police station) ಮಹಾಗಣಪತಿಯನ್ನು ಪ್ರತಿಷ್ಠಾಪನೆಯನ್ನು ಮಾಡಿದೆ. ಅಲ್ಲದೇ, ಸೆಪ್ಟೆಂಬರ್ 18 ರಂದು ಲಿಂಕ್ ರಸ್ತೆಯಲ್ಲಿ ಹಿಂದೂ (Hindu) ಶೋಭಾ ಯಾತ್ರೆ ನಡೆಸಲು ಹಿಂದೂ ಪರ ಸಂಘಟನೆ ನಿರ್ಧರಿಸಿದೆ. ಈ ಕುರಿತು ಹಿಂದೂ ಜಾಗರಣ ವೇದಿಕೆಯ ಮಹೇಶ್ ಮಾಹಿತಿ ನೀಡಿದ್ದು, ಶೋಭಾಯಾತ್ರೆಯಲ್ಲಿ ಸುಮಾರು 5 ಸಾವಿರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಧನಂಜಯ್ ಶೋಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲಿ ಎಂದು ಹೇಳಿದ್ದಾರೆ.

ಪೊಲೀಸ್‌ ಇಲಾಖೆಯಿಂದ ಸ್ಪಷ್ಟನೆ

ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಹೆಚ್ಚಿಸಿದ್ದಾರೆ. "ಮೆರವಣಿಗೆಗೆ ಯಾವುದೇ ಹೊಸ ನಿರ್ಬಂಧ ಹೇರಿಲ್ಲ, ಕೇವಲ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸೂಕ್ತ ರಕ್ಷಣೆ ನೀಡಲು ಮುಂಚಿತವಾಗಿ ಮಾಹಿತಿ ನೀಡುವಂತೆ ಮಾತ್ರ ಕೋರಲಾಗಿತ್ತು" ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷದ ಬೃಹತ್ ಮೆರವಣಿಗೆಯ ಸಮಯದಲ್ಲಿ ಆಯೋಜಕರು ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ. ಆದ್ದರಿಂದ, ಈ ವರ್ಷ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಮೆರವಣಿಗೆ ಹೊರಡುವ ಸಮಯ ಮತ್ತು ನಿಖರ ವಿವರಗಳನ್ನು ಮುಂಚಿತವಾಗಿ ಠಾಣೆಗೆ ನೀಡಿ ಅನುಮತಿ ಪಡೆಯಬೇಕು ಎಂದು ಪೊಲೀಸ್‌ ಇಲಾಖೆ ಸೂಚನೆ ನೀಡಿದೆ.

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ

ಇನ್ಸ್‌ಪೆಕ್ಟರ್‌ ಧನಂಜಯ್‌ ಅಮಾನತಿಗೆ ಪಟ್ಟು

ಇನ್ನು ಇನ್ಸ್‌ಪೆಕ್ಟರ್‌ ಧನಂಜಯ್‌ ಬಿಜೆಪಿ ಪಟ್ಟು ಹಿಡಿದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಗಣೇಶೋತ್ಸವ ಸಮಿತಿಯ ಯುವಕರಿಗೆ ದರ್ಪದಿಂದ ಧಮ್ಕಿ ಹಾಕಿರುವ ಇನ್ಸ್‌ಪೆಕ್ಟರ್ ಧನಂಜಯ್‌ನನ್ನು ಸಸ್ಪೆಂಡ್ ಮಾಡಲೇಬೇಕು ಎಂದು ಸರ್ಕಾರಕ್ಕೆ ಗಡುವು ನೀಡಿದ್ದಾರೆ.