ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: ಎಸ್ಸೆಸ್ಸೆಲ್ಸಿಯಲ್ಲಿ 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿನಂದನೆ

Gruhalakshmi Scheme Success Story: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಮಾಧುರಿ ಆರ್. 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿನಂದಿಸಿದ್ದಾರೆ.

ಮೈಸೂರಿನ ವಿದ್ಯಾರ್ಥಿನಿ ಮಾಧುರಿ ಆರ್. ಅವರಿಗೆ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸನ್ಮಾನ.

ಮೈಸೂರು, ಮೇ 15: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿʼ ಯೋಜನೆ (Gruhalakshmi Scheme) ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಭದ್ರತೆಯ ಆಶಾಕಿರಣವಾಗುತ್ತಿರುವುದಕ್ಕೆ ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಮಾಧುರಿ ಆರ್. ಅವರ ಸಾಧನೆಯೇ ಸಾಕ್ಷಿಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ತಾಯಿಗೆ ಬರುತ್ತಿದ್ದ 2000 ರೂ. ಸಹಾಯಧನವನ್ನು ಸದುಪಯೋಗ ಮಾಡಿಕೊಂಡು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 624 ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಮಾಧುರಿ ಆರ್. ಅವರ ಸಾಧನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ಮಾಧುರಿ ಆರ್. ಅಪೂರ್ವ ಸಾಧನೆ ಮಾಡಿದ್ದಾರೆ. ಅವರ ಈ ಯಶಸ್ಸಿನ ಹಿಂದೆ ಕುಟುಂಬದ ಪರಿಶ್ರಮದ ಜತೆಗೆ ಗೃಹಲಕ್ಷ್ಮಿ ಯೋಜನೆಯ ಸಹಕಾರವೂ ಪ್ರಮುಖ ಪಾತ್ರವಹಿಸಿದೆ.

ವಿದ್ಯಾರ್ಥಿನಿ ಮಾಧುರಿ ಅವರ ತಾಯಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದು, ಸರ್ಕಾರದಿಂದ ದೊರೆಯುತ್ತಿರುವ ಆರ್ಥಿಕ ಸಹಾಯವನ್ನು ಮಗಳ ವಿದ್ಯಾಭ್ಯಾಸದ ಅಗತ್ಯಗಳಿಗೆ ಬಳಸಿಕೊಂಡು ಸದುಪಯೋಗಪಡಿಸಿಕೊಂಡಿದ್ದಾರೆ. ಈ ಮೂಲಕ ಸರ್ಕಾರದ ಯೋಜನೆಗಳು ಸರಿಯಾದ ಫಲಾನುಭವಿಗಳ ಕೈ ಸೇರಿದಾಗ ಸಮಾಜದಲ್ಲಿ ಹೇಗೆ ಸಕಾರಾತ್ಮಕ ಬದಲಾವಣೆ ತರಬಹುದು ಎಂಬುದಕ್ಕೆ ಈ ಕುಟುಂಬ ಮಾದರಿಯಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಂದು ಮಾಧುರಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಿಹಿ ಹಂಚಿ ಅಭಿನಂದಿಸಿದ್ದಾರೆ.

ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ʼಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳ ಕೈ ಸೇರಿದಾಗ ಇಂತಹ ಅಮೋಘ ಸಾಧನೆಗಳು ಸಾಧ್ಯವಾಗುತ್ತವೆ. ಮಾಧುರಿ ಆರ್. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ವಿದ್ಯಾರ್ಥಿನಿ ಹಾಗೂ ಅವರ ಪೋಷಕರಿಗೆ ಇಲಾಖೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳುʼ ಎಂದು ತಿಳಿಸಿದ್ದಾರೆ.‌

ಮೈಸೂರಿನಲ್ಲಿ ಸಿಎಂ ಸಿಟಿ ರೌಂಡ್ಸ್‌; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ, ಗುಣಮಟ್ಟ ಕಾಪಾಡಲು ಸೂಚನೆ

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೂರ್ಗಳ್ಳಿ ಮಹದೇವು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಬ್ಬಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.