ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kodi Mutt Swamiji: ಭಾರತಕ್ಕೆ ಕಾದಿದೆ ಜಗತ್ತೇ ತಿರುಗಿನೋಡುವಂತಹ ಆಘಾತ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!

Kodi Mutt Swamiji: ದೇಶದ ಬಗ್ಗೆ ಕೋಡಿಶ್ರೀಗಳು ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಹೇಳಿದ್ದಾರೆ.

ಭಾರತಕ್ಕೆ ದೊಡ್ಡ ಆಘಾತ ಕಾದಿದೆ: ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!

Profile Prabhakara R Jul 15, 2025 3:24 PM

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಇತ್ತೀಚೆಗೆ ಭವಿಷ್ಯ ನುಡಿದಿದ್ದ ಕೋಡಿಮಠ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಅವರು ಇದೀಗ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂದು ಹೇಳಿದ್ದಾರೆ.

ಪರಿಹಾರ ಮಾಡಿಕೊಂಡರೆ ಆಪತ್ತು ತಪ್ಪಬಹುದು ಎಂದು ಹೇಳಿರುವ ಸ್ವಾಮೀಜಿ, ಯುಗಾದಿ ನಂತರ ಮಳೆ, ಬೆಳೆ ಬಗ್ಗೆ ನಿರ್ಧಾರ ಆಗುತ್ತದೆ. ಸಂಕ್ರಾಂತಿಯಲ್ಲಿ ರಾಜ್ಯಕ್ಕೆ ಮತ್ತು ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಇಂಥಹ ವ್ಯಾವಹಾರಿಕ ವಿಷಯಗಳು ಬರುತ್ತವೆ. ಹೀಗಾಗಿ ಸಂಕ್ರಾಂತಿವರೆಗೆ ಏನೂ ತೊಂದರೆ ಇಲ್ಲ, ಸಂಕ್ರಾಂತಿ ಫಲವನ್ನು ನೋಡಿ ಹೇಳಬೇಕಾಗುತ್ತದೆ ತಿಳಿಸಿದ್ದಾರೆ.

ಯುದ್ಧಗಳು ಮುಂದುವರಿಯಲಿವೆ. ಮನಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. 84 ಲಕ್ಷ ಜೀವ ರಾಶಿಗಳಲ್ಲಿ ಆತ್ಮ ಕಡೆಯದಾಗಿದ್ದು, ಮಾನವನಿಗೆ ಜ್ಞಾನ ಹಾಗೂ ವಿವೇಕ ನೀಡಲಾಗಿದೆ. ಇದನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಧ್ಯಾನ ಕೇಂದ್ರಗಳು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಬೆಳವಣಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Sigandur Bridge: ಶರಾವತಿ ನೂತನ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು: ನಿತಿನ್‌ ಗಡ್ಕರಿ ಘೋಷಣೆ