ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನಂಜನಗೂಡು ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ, ಮಗು ಮೇಲೆ ಚಿರತೆ ದಾಳಿ

Leopard attack: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ಘಟನೆ ನಡೆದಿದೆ. ಮಹದೇವಸ್ವಾಮಿ ಎಂಬುವವರು ಪತ್ನಿ, ಮಗು ಜತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಇದರಿಂದ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ನಂಜನಗೂಡು ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ, ಮಗು ಮೇಲೆ ಚಿರತೆ ದಾಳಿ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 31, 2026 3:58 PM

ಮೈಸೂರು, ಜ.31: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ನಡೆದಿದೆ. ಮಹದೇವಸ್ವಾಮಿ ಎಂಬುವವರು ಪತ್ನಿ, ಮಗು ಜತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಈ ವೇಳೆ ದಂಪತಿ, ಮಗು ಬೈಕ್‌ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ತಗಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಜಮೀನಿಗೆ ತೆರಳುತಿದ್ದ ರೈತನ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ: ಜಮೀನಿಗೆ ತೆರಳುತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವುದು ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಆದರೆ, ರೈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೊಮ್ಮನಹಳ್ಳಿ ಗ್ರಾಮದ ರಾಜಶೇಖರಪ್ಪ (42) ಚಿರತೆ ದಾಳಿಗೆ ಒಳಗಾದ ರೈತ. ಇವರು ಗುರುವಾರ ರಾತ್ರಿ ಸುಮಾರು 10.30ರ ಸುಮಾರಿಗೆ ಊರಿನ ಪಕ್ಕದಲ್ಲಿರುವ ಜಮೀನಿನಲ್ಲಿ ಬೇಯಿಸಿ ಒಣ ಹಾಕಿರುವ ಅರಿಶಿಣವನ್ನು ನೋಡಿಕೊಳ್ಳಲು ಬೈಕ್‌ನಲ್ಲಿ ಮಾದಲವಾಡಿ ಕಡೆಗೆ ಹೋಗುತ್ತಿದ್ದಾಗ ಪೊದೆಯೊಳಗೆ ಅಡಗಿದ್ದ ಚಿರತೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ರೈತನ ಕತ್ತು, ತುಟಿ ಮತ್ತು ಮುಖಕ್ಕೆ ಪರಚಿ ಗಂಭೀರ ಗಾಯಗೊಳಿಸಿದೆ.

ವಾಕಿಂಗ್‌ಗೆ ಹೋಗುತ್ತಿದ್ದ ಬಾಣಂತಿ ಮೇಲೆ ಸಾಕು ನಾಯಿ ದಾಳಿ!

ಬೈಕ್‌ನಿಂದ ಬಿದ್ದ ವೇಳೆ ಹಾರ್ನ್ ಬಟನ್ ಒತ್ತಿದ್ದ ಹಿನ್ನೆಲೆ ಅದರ ಶಬ್ದಕ್ಕೆ ಚಿರತೆ ಓಡಿ ಹೋಗಿದೆ. ಗಾಯಗೊಂಡ ರೈತ ರಾಜಶೇಖರಪ್ಪನನ್ನು ಚಿಕಿತ್ಸೆಗಾಗಿ ಚಾಮರಾಜನಗರದ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.