Leopard spotted: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ; ಕಚೇರಿಗೆ ಬಾರದಂತೆ ನೌಕರರಿಗೆ ಸೂಚನೆ
Leopard spotted: ಕ್ಯಾಂಪಸ್‌ನ ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಇದರಿಂದ ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಇನ್ಫೋಸಿಸ್ ಸಂಸ್ಥೆ ತಿಳಿಸಿದೆ.
Prabhakara R
December 31, 2024
ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ ಬಳಿ ಮಂಗಳವಾರ ಮುಂಜಾನೆ ಚಿರತೆ (Leopard spotted) ಪ್ರತ್ಯಕ್ಷವಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಇಂದು ಮನೆಯಿಂದಲೇ ಕೆಲಸ ಮಾಡುವಂತೆ ನೌಕರರಿಗೆ ಕಂಪನಿ ಸೂಚಿಸಿದೆ. ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕಾಗಮಿಸಿ ಚಿರತೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕ್ಯಾಂಪಸ್‌ನ ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಇದರಿಂದ ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆ ತಿಳಿಸಿ, ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಸೂಚನೆ ನೀಡಿದೆ.
ಇನ್ನು ಮೈಸೂರು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅರವಳಿಕೆ ತಜ್ಞರ ತಂಡ, ಚಿರತೆ ಕಾರ್ಯಪಡೆಯ ತಂಡ ಇನ್ಫೋಸಿಸ್ ಕ್ಯಾಂಪಸ್ಗೆ ಆಗಮಿಸಿದ್ದು, ಚಿರತೆ ಚಲನವಲನ ಆಧರಿಸಿ ಅದನ್ನು ಸೆರೆ ಹಿಡಿಯಲು ಕಾರ್ಯ ತಂತ್ರವನ್ನು ರೂಪಿಸುತ್ತಿದೆ. ಡಿಸಿಎಫ್ ಬಸವರಾಜ್ ನೇತೃತ್ವದಲ್ಲಿ ಸೆರೆ ಕಾರ್ಯಾಚರಣೆ ನಡೆಯುತ್ತಿದೆ.
ಮೈಸೂರು ವಿಭಾಗದ ಮುಖ್ಯ ಅರಣ್ಯಾಧಿಕಾರಿ ಮಾಲತಿ ಪ್ರಿಯ ಈ ಕುರಿತು ಪ್ರತಿಕ್ರಿಯಿಸಿ, "ಇನ್ಫೋಸಿಸ್ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಡಿಸಿಎಫ್ ಬಸವರಾಜ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | LPG cylinder Blast: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಪಾಠ ಕಲಿಯಲು ಹೋದವಳಿಗೆ ಪ್ರೇಮಪಾಠ; ವಿದ್ಯಾರ್ಥಿನಿ ಜತೆ ಲೆಕ್ಚರರ್ ಎಸ್ಕೇಪ್!
ಮೈಸೂರು: ಗುರು ಎಂದರೆ ದೇವರ ಸಮ. ಆದರೆ ಇಲ್ಲೊಬ್ಬ ಲೆಕ್ಚರರ್ ವಿದ್ಯಾರ್ಥಿನಿ ಜತೆಯೇ ಪ್ರೀತಿ ಮಾಡಿ ಆಕೆಯ ಜತೆ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯಲ್ಲಿ (Mysore News) ನಡೆದಿದೆ. ತಮ್ಮನ್ನು ಬಿಟ್ಟು ಹೋದ ಮಗಳಿಗೆ ವಾಪಸ್ ಬರುವಂತೆ ತಂದೆ-ತಾಯಿ ಹೇಳಿದಾಗ, ನಮಗೆ ತೊಂದರೆ ಕೊಡಬೇಡಿ ನಾವು ಮದುವೆ ಆಗಿದ್ದೀವಿ ಎಂದು ಮಗಳು ಸಂದೇಶ ಕಳುಹಿಸಿದ್ದಾಳೆ. ಇದರಿಂದ ಯುವತಿಯ ಪೋಷಕರು ಕಂಗಾಲಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಮಹಾವೀರ್ ಕಾಲೇಜ್ ಆಫ್ ಎಜ್ಯುಕೇಶನ್‌ನಲ್ಲಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ 24 ವರ್ಷದ ವಿದ್ಯಾರ್ಥಿನಿಯೊಂದಿಗೆ 39 ವರ್ಷದ ಲೆಕ್ಚರರ್ ಪರಾರಿಯಾಗಿದ್ದಾನೆ. ಲೆಕ್ಚರರ್ ಯಶೋದ್ ಕುಮಾರ್ ಎಂಬುವವರು ತನಗಿಂತ 15 ವರ್ಷದ ಕಿರಿಯ ಯುವತಿಯ ಜತೆ ಪ್ರೀತಿ ಶುರು ಮಾಡಿ, ಆಕೆಯೊಂದಿಗೆ ಪರಾರಿಯಾಗಿದ್ದಾನೆ.
ಇಬ್ಬರ ಪ್ರೇಮಪುರಾಣ ಹುಡುಗಿ ಮನೆಯವರಿಗೆ ತಿಳಿದಾಗ ಲೆಕ್ಚರರ್ ಸಹವಾಸ ಬಿಟ್ಟುಬಿಡು ಎಂದು ಪೋಷಕರು ಅಂಗಲಾಚಿದ್ದರು. ಆಕೆಯನ್ನು ಹೊರಗೆ ಬಿಡದೇ ಮನೆಯಲ್ಲಿಯೇ ಇರಿಸಿಕೊಂಡಿದ್ದರು. ಆದರೆ ಡಿ.26 ರಂದು ಯುವತಿಯು ಸರ್ಟಿಫಿಕೇಟ್ ತರುವುದಾಗಿ ಹೇಳಿ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ.
ಯುವತಿಯ ಕುಟುಂಬದವರು ಬೀದಿಬದಿ ಸೊಪ್ಪು ಮಾರಿ ಜೀವನ ಸಾಗಿಸುತ್ತಿದ್ದಾರೆ. ತಮ್ಮ ಕಷ್ಟದ ಬದುಕಿನಲ್ಲೂ ಪೋಷಕರು ಮಗಳ ವಿದ್ಯಾಭ್ಯಾಸಕ್ಕಾಗಿ ಎರಡು ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಆದರೆ, ಮಗಳು ಲೆಕ್ಚರರ್ ಜತೆ ಪ್ರೀತಿ-ಪ್ರೇಮ ಎಂದು ಮನೆ ಬಿಟ್ಟು ಹೋಗಿದ್ದಾಳೆ. ಇದರಿಂದ ಬೇಸರಗೊಂಡು ತಂದೆ ಹಾಸಿಗೆ ಹಿಡಿದಿದ್ದಾರೆ. ಮನೆಗೆ ವಾಪಸ್ ಬಂದುಬಿಡು ಎಂದು ಪೋಷಕರು ಹೇಳಿದಾಗ, ನಮಗೆ ತೊಂದರೆ ಕೊಡಬೇಡಿ ನಾವು ಮದುವೆ ಆಗಿದ್ದೀವಿ ಎಂದು ಯುವತಿ ತನ್ನ ಪೋಷಕರಿಗೆ ವಾಟ್ಸ್‌ಆ್ಯಪ್ ಮೆಸೇಜ್ ಕಳುಹಿಸಿದ್ದಾಳೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಈ ಬಗ್ಗೆ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Viral Video: ನ್ಯೂಇಯರ್ ಪಾರ್ಟಿಗೆ ಮದ್ಯ ಕದಿಯೋಕೆ ಬಾರ್‌ಗೆ ನುಗ್ಗಿದ ಐನಾತಿ ಕಳ್ಳ; ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ!