ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mysuru Dasara: ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ನಿರ್ಧಾರ ಮರುಪರಿಶೀಲಿಸಿ; ಸಿಎಂಗೆ ಮನವಿ ಪತ್ರ

Banu Mushtaq: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವನ್ನು ಮರು ಪರಿಶೀಲಿಸಿ, ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತು.

ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ನಿರ್ಧಾರ ಮರುಪರಿಶೀಲಿಸಿ

-

Prabhakara R Prabhakara R Aug 31, 2025 2:07 PM

ಮೈಸೂರು: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವು ಭಕ್ತರಲ್ಲಿ ತೀವ್ರ ಅಸಮಾಧಾನ ಮಾಡಿಸಿದೆ. ಹೀಗಾಗಿ ಈ ಕುರಿತು ಕೂಡಲೇ ಮರು ಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತು.

ಈ ಸಂದರ್ಭದಲ್ಲಿ ಮಡಿಲು ಸೇವಾ ಟ್ರಸ್ಟ್ ಮೈಸೂರ್‌ನ ನವೀನ್, ಹಿಂದೂ ಮುಖಂಡರಾದ ಅಶೋಕ್, ಮಂಜುನಾಥ್ ದೀಪಕ್, ಹರೀಶ್, ನಿತೀನ್ ಯಾದವ್ ಪುರೋಹಿತರಾದ ಸಂತೋಷ್ , ಹಿಂದೂ ಜನಜಾಗೃತಿ ಸಮಿತಿಯ ರಾಘವೇಂದ್ರ, ಪುಟ್ಟರಾಜಯ್ಯ, ಯಶ್‌ಪಾಲ್, ಗೋಪಾಲಕೃಷ್ಣ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ, ಅದು ಕರ್ನಾಟಕದ ಅತಿ ದೊಡ್ಡ ಧಾರ್ಮಿಕ ಹಾಗೂ ಪಾರಂಪರಿಕ ಹಬ್ಬ. ಒಂಬತ್ತು ದಿನಗಳ ನವರಾತ್ರಿ ವೇಳೆ ಕಾಳಿ, ಮಹಾಲಕ್ಷ್ಮಿ, ಸರಸ್ವತಿ ದೇವಿಯರ ಆರಾಧನೆ ನಡೆಯುತ್ತಿದ್ದು, 10ನೇ ದಿನ ದೇವಿ ಚಾಮುಂಡೇಶ್ವರಿ ಮಹಿಷಾಸುರನ ಸಂಹಾರ ಮಾಡಿದ್ದರಿಂದ ವಿಜಯೋತ್ಸವವನ್ನು ಆಚರಿಸಲಾಗುತ್ತದೆ.

ಇಂತಹ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿತ ಮುಖ್ಯ ಅತಿಥಿಯು ದೇವಿಯ ಮೇಲೆ ಶ್ರದ್ಧೆ, ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ ಬಾನು ಮುಷ್ತಾಕ್‌ ಅವರು ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದು, ದತ್ತಪೀಠ ಹೋರಾಟದ ಸಂದರ್ಭದಲ್ಲೂ ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅನುಚಿತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ.

ಕರ್ನಾಟಕವು ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಅಸಂಖ್ಯಾತ ಗಣ್ಯರನ್ನು ಹೊಂದಿದೆ. ಪ್ರಸಿದ್ಧ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಾನಗಳ ಜತೆಗೆ ಪದ್ಮಭೂಷಣ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಅವರ ಸಾಹಿತ್ಯ ಮತ್ತು ದಾರ್ಶನಿಕ ಕೃತಿಗಳು ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತಂದುಕೊಟ್ಟಿವೆ. ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಕಡೆಗಣಿಸಿ ವಿದೇಶಿ ಬೂಕರ್ ಪ್ರಶಸ್ತಿ ಪಡೆದವರನ್ನು ಆಹ್ವಾನಿಸುವುದು ಎಷ್ಟು ಸರಿ ಎಂದು ಸಮಿತಿ ಪ್ರಶ್ನಿಸಿದೆ.

ಈ ಸುದ್ದಿಯನ್ನೂ ಓದಿ | Mysuru dasara 2025: ಚಾಮುಂಡಿ ದೇಗುಲ ಹಿಂದೂಗಳದ್ದು ಆಗಿರದಿದ್ದರೆ, ಮುಜರಾಯಿಗೆ ಸೇರುತ್ತಿರಲಿಲ್ಲ: ಪ್ರಮೋದಾದೇವಿ ಒಡೆಯರ್‌

ಬೇಡಿಕೆಗಳು :

ಕರ್ನಾಟಕದ ಕೋಟ್ಯಂತರ ಭಕ್ತರ ಪರವಾಗಿ, ನಾವು ಸರ್ಕಾರವನ್ನು ಬಾನು ಮುಷ್ತಾಕ್‌ರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಹಾಗೂ ಈ ಪವಿತ್ರ ಹಬ್ಬದ ಉದ್ಘಾಟನೆಗೆ ಡಾ. ಎಸ್. ಎಲ್. ಭೈರಪ್ಪ ಅವರಂತಹ ಗಣ್ಯರನ್ನು ಗೌರವಿಸುವಂತೆ ಆಗ್ರಹಿಸುತ್ತೇವೆ.

ಇದರಿಂದ ಮೈಸೂರು ಹಿಂದೂ ದಸರಾ ಹಬ್ಬದ ಪಾವಿತ್ರ್ಯ ಕಾಪಾಡಲ್ಪಡುವುದರೊಂದಿಗೆ ಸಮುದಾಯದ ಭಾವನೆಗಳಿಗೆ ನ್ಯಾಯ ಸಿಗುತ್ತದೆ. ನೀವು ಈ ಕುರಿತು ಕೂಡಲೇ ಮರುಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಈ ಮೂಲಕ ವಿನಂತಿಸುತ್ತೇವೆ ಎಂದು ಪತ್ರದಲ್ಲಿ ಕೋರಲಾಗಿದೆ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಶರತ್ ಕುಮಾರ್ ತಿಳಿಸಿದ್ದಾರೆ.