ಮೈಸೂರು: ಲೋಕಸಭೆಯ ಜಂಟಿ ಕಾರ್ಯದರ್ಶಿ, ದೆಹಲಿ ಕನ್ನಡಿಗ ಚಂದ್ರಶೇಖರ್ ಎನ್.ಪಿ. (Chandrashekhar N P) ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ (Mysore University) ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ನಿಯಮಾನುಸಾರ ನಡೆದ ಮೌಲ್ಯಮಾಪನ ಹಾಗೂ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅವರು ಮಂಡಿಸಿದ ಸಂಶೋಧನಾ ಮಹಾಪ್ರಬಂಧವನ್ನು ಅಂಗೀಕರಿಸಿ ಪಿಎಚ್.ಡಿ ಪದವಿ ಪ್ರದಾನ ಮಾಡಲು ಅನುಮೋದನೆ ನೀಡಲಾಗಿದೆ.
‘ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ವ್ಯಾಪ್ತಿಯ ಕನ್ನಡ ಸಾಂಸ್ಕೃತಿಕ ಅಧ್ಯಯನ’ ವಿಷಯದ ಕುರಿತು ಚಂದ್ರಶೇಖರ್ ಎನ್.ಪಿ. ಮೈಸೂರು ಮಹಾರಾಜ ಕಾಲೇಜಿನ ಕನ್ನಡ ವಿಭಾಗದ ಡಾ. ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ಮಂಡಳಿಯ ಶಿಫಾರಸಿನ ಮೇರೆಗೆ ಪದವಿ ನೀಡಲಾಗಿದೆ.