ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mantra Mangalya: ನ.13ರಂದು ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ, ಗುರುವಂದನಾ ಕಾರ್ಯಕ್ರಮ

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಲೀಲಾಖ್ಯ ಮತ್ತು ಕನ್ನಡ ಮಠದಲ್ಲಿ ನ.13ರಂದು ಗುರುವಾರ ಬೆಳಗ್ಗೆ 10.30ಕ್ಕೆ ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ನ.13ರಂದು ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ, ಗುರುವಂದನಾ ಕಾರ್ಯಕ್ರಮ

-

Profile Siddalinga Swamy Sep 27, 2025 2:52 PM

ಪಿರಿಯಾಪಟ್ಟಣ: ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಲೀಲಾಖ್ಯ ಮತ್ತು ಕನ್ನಡ ಮಠದಲ್ಲಿ ನ.13ರಂದು ಗುರುವಾರ ಬೆಳಗ್ಗೆ 10.30ಕ್ಕೆ ಮಂತ್ರ ಮಾಂಗಲ್ಯ ಉಚಿತ ಸಾಮೂಹಿಕ ವಿವಾಹ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಬೆಟ್ಟದಪುರ ಕನ್ನಡ ಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಅವರು ದಿವ್ಯ ಉಪಸ್ಥಿತರಿರುವರು.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು -ವರರಿಗೆ ಉಚಿತ ಮಾಂಗಲ್ಯ, ಸಮವಸ್ತ್ರ ಹಾಗೂ ಭೋಜನ ವ್ಯವಸ್ಥೆ ಕಲ್ಪಿಸಲಾಗಿದ್ದು, ಅ.25ರ ಒಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.

ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ನೂತನ ವಧು-ವರರು ಆಧಾರ್ ಕಾರ್ಡ್ ಕಡ್ಡಾಯವಾಗಿ ನಮೂದಿಸತಕ್ಕದ್ದು ಹಾಗೆಯೇ ಈ ಕಾರ್ಯಕ್ರಮದಲ್ಲಿ ಮರು ಮದುವೆಯ ಜೋಡಿಗೆ ಅವಕಾಶವಿದ್ದು ಕಾನೂನಿನಡಿ ವಿವಾಹ ವಿಚ್ಚೇದನ ಪ್ರಮಾಣಪತ್ರ ಕಡ್ಡಾಯವಾಗಿ ಸಲ್ಲಿಸಬೇಕು. ನೋಂದಣಿಗಾಗಿ ಕುಮಾರ್ ಮೊ.ಸಂ: 9844357875 ಗೆ ಸಂಪರ್ಕಿಸಬಹುದಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Cauvery Aarti: ಕಾವೇರಿ ಆರತಿ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ: ಡಿಕೆಶಿ