ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇವೆ. ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ (Dasara Golden Pass) ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕಾರ್ಡ್ ಲಭ್ಯವಿದೆ. ಈ ಬಾರಿಯ ದಸರಾ ಸೆ.22 ರಿಂದ ಅಕ್ಟೋಬರ್ 2 ರ ವರೆಗೆ ನಡೆಯಲಿದೆ.
ದಸರಾ ಗೋಲ್ಡ್ ಕಾರ್ಡಿಗೆ 6500 ರೂ. ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ‘ಗೋಲ್ಡ್ ಕಾರ್ಡ್’ಗಳ ಮಾರಾಟಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದೆ.
https://mysoredasara.gov.in/ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯ ಇವೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋಲ್ಡ್ ಕಾರ್ಡ್ ಖರೀದಿಸಿದವರಿಗೆ (ಒಂದಕ್ಕೆ ₹ 6,500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ (ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಸುದ್ದಿಯನ್ನೂ ಓದಿ: Dasara 2025: ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ
ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ (Banu Mushtaq) ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ’. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.