Mysore News: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ: ಡಾ.ಪಿ.ಶಿವರಾಜು

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬಹುರೂಪಿ ನಾಟಕೋತ್ಸವ -2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು ಜಿಲ್ಲೆಗೆ ರಂಗಾಯಣ ಒಂದು ಹೆಮ್ಮೆ

image-73d5d2f6-5ad8-440d-b7b9-02da7f630f58.jpg
Profile Ashok Nayak January 3, 2025
ಜ.14 ರಿಂದ ಜನವರಿ 19 ರವರೆಗೆ ಬಹುರೂಪಿ ನಾಟಕೋತ್ಸವ ಮೈಸೂರು: ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಜ.14 ರಿಂದ 19ವರೆಗೆ ಹಮ್ಮಿಕೊಂಡಿದ್ದು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ನಾಟಕೋತ್ಸವ ಯಶಸ್ವಿಗೊಳಿಸಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ತಿಳಿಸಿದರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬಹುರೂಪಿ ನಾಟಕೋತ್ಸವ -2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು ಜಿಲ್ಲೆಗೆ ರಂಗಾಯಣ ಒಂದು ಹೆಮ್ಮೆ. ಮಾನ್ಯ ಮುಖ್ಯಮಂತ್ರಿಗಳ ತವರು ಜಿಲ್ಲೆ. ನಾಡಹಬ್ಬ ದಸರಾವನ್ನು ಮೈಸೂರು ಜಿಲ್ಲೆಯಲ್ಲಿ ಆಚರಿಸುವುದು ನಮ್ಮ ಜಿಲ್ಲೆಗೆ ಕೀರ್ತಿ. ಬಹುರೂಪಿ ನಾಟಕೋತ್ಸವವವನ್ನು ಜನವರಿ 14 ರಿಂದ ಜನವರಿ 19 ರವರೆಗೆ ಕಲಾಮಂದಿರದಲ್ಲಿ ಹಮ್ಮಿ ಕೊಳ್ಳಲಾಗಿದೆ. ನಾಗರೀಕ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಟಕಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆಯ ವತಿಯಿಂದ ಕಲಾಮಂದಿರ ಹಾಗೂ ರಂಗಾಯಣದ ಆವರಣದಲ್ಲಿ ಸ್ವಚ್ಚತೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಸರ್ಕಾರದ ಯೋಜನೆಗಳಿಗೆ ಪ್ರಚಾರ ನೀಡಲು ವ್ಯವಸ್ಥೆ ಮಾಡಿರುವ ಡಿಜಿಟಲ್ ಸ್ಕ್ರಿನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು. ಬಹುರೂಪಿ ನಾಟಕೋತ್ಸವ ನಡೆಯುವುದರಿಂದ ಆ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಚೆಸ್ಕಾ ಅಧಿಕಾರಿಗಳು ಜಾಗ್ರತೆ ವಹಿಸಬೇಕು. ಉತ್ಸವದ ದಿನಗಳಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕೆ ಎಸ್ ಆರ್ ಟಿ ಸಿ ವತಿಯಿಂದ ಒದಗಿಸಬೇಕು.ಶಾಲಾ ಕಾಲೇಜು ಶಿಕ್ಷಕರು ಹಾಗೂ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲು ಅವರಿಗೆ ಮಾಹಿತಿ ಯನ್ನು ನೀಡಬೇಕು ಎಂದರು. ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಅವರು ಮಾತನಾಡಿ ರಂಗಾಯಣ ಪ್ರಾರಂಭವಾಗಿ 35 ವರ್ಷ ಗಳು ಸಂದಿವೆ. ಬಹುರೂಪಿ ನಾಟಕೋತ್ಸವದಲ್ಲಿ 6 ದಿನಗಳ ಕಾಲ 24 ನಾಟಕಗಳು ಪ್ರದರ್ಶನ ಆಗುತ್ತವೆ. ಇವು ಬೇರೆ ಬೇರೆ ಭಾಷೆಯ ನಾಟಕಗಳು ಇವೆ. ಈ ಬಾರಿ ಮಕ್ಕಳಿಗಾಗಿ ಮಕ್ಕಳ ನಾಟಕೋತ್ಸವ ವನ್ನು ಒಂದು ವೇದಿಕೆಯಲ್ಲಿ ಮಾಡಲಾಗುತ್ತದೆ. ಎಲ್ಲಾ ಇಲಾಖೆಗಳ ಸಹಕಾರ ನೀಡುವ ಮೂಲಕ ನಾಟಕೋತ್ಸವ ಯಶಸ್ವಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಹುರೂಪಿ ನಾಟಕೋತವಕ್ಕ್ಕೆ ಆಗಮಿಸುವ ಅತಿಥಿಗಳು, ಕಲಾತಂಡಗಳು ವಿದ್ವಾಂಸರನ್ನು ಕರೆತರಲು 4 ಮಿನಿ ಬಸ್ ಗಳು ಹಾಗೂ 3 ಟಾಟಾ ಸುಮೊ ವಾಹನ ಗಳನ್ನು ಒದಗಿಸಬೇಕು. ಗಣ್ಯರ ವಾಸ್ತವ್ಯಕ್ಕಾಗಿ ವಸತಿ ಗೃಹಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕಾಯ್ದಿರಿ ಸಬೇಕು. ಬಹುರೂಪಿ ವಸ್ತು ಪ್ರದರ್ಶನದಲ್ಲಿ ಕರಕುಶಲ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: #mysore news
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ