ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Mysore News: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಗೋಡೆ ಕುಸಿತ; ಅವಶೇಷಗಳಡಿ ಸಿಲುಕಿದ ಕಾರ್ಮಿಕ

Mysore News: ಕಾರ್ಮಿಕರು ಹೊಸ ಕಟ್ಟಡ ನಿರ್ಮಾಣಕ್ಕಾಗಿ ಶಿಥಿಲಗೊಂಡಿದ್ದ ಕಟ್ಟಡವನ್ನು ಒಡೆಯುವ ಕೆಲಸ ಮಾಡುತ್ತಿದ್ದರು. ಈ ವೇಳೆ ಗೋಡೆ ಕುಸಿದು ಅವಶೇಷಗಳಡಿ ಕಾರ್ಮಿಕರೊಬ್ಬರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಗೋಡೆ ಕುಸಿತ; ಅವಶೇಷಗಳಡಿ ಸಿಲುಕಿದ ಕಾರ್ಮಿಕ

Profile Prabhakara R Jan 28, 2025 7:29 PM

ಮೈಸೂರು: ನಗರದ ಮಹಾರಾಣಿ ಕಾಲೇಜಿನಲ್ಲಿ ಶಿಥಿಲ ಕಟ್ಟಡದ ದುರಸ್ತಿ ವೇಳೆ ಗೋಡೆ ಕುಸಿದು, ಅವಶೇಷಗಳಡಿ ಕಾರ್ಮಿಕರೊಬ್ಬರು ಸಿಲುಕಿರುವ ಘಟನೆ (Mysore News) ಮಂಗಳವಾರ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ.

ಸದ್ದಾಂ ಎಂಬ ಕಾರ್ಮಿಕ ಗೋಡೆ ಅವಶೇಷಗಳಡಿ ಸಿಲುಕಿದ್ದಾರೆ. ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದರಿಂದ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಿಟಕಿಗಳನ್ನು ತೆಗೆದು ಹಾಕುವ ವೇಳೆ ಕಟ್ಟಡ ಕುಸಿದಿದೆ. ಜೆಸಿಬಿ ಮೂಲಕ ಅವಶೇಷಗಳನ್ನು ತೆರವು ಮಾಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಮಿಕರು ಹೊಸ ಕಟ್ಟಡ ನಿರ್ಮಾಣಕ್ಕಾಗಿ ಶಿಥಿಲಗೊಂಡಿದ್ದ ಕಟ್ಟಡವನ್ನು ಒಡೆಯುವ ಕೆಲಸ ಮಾಡುತ್ತಿದ್ದರು. ಹಳೆಯ ಕಟ್ಟಡದಲ್ಲಿದ್ದ ಸಾಮಗ್ರಿಯನ್ನು ತೆರವುಗೊಳಿಸಿದ ಬಳಿಕ ಮೂವರು ಕಾರ್ಮಿಕರು ಕಿಟಕಿಗಳನ್ನು ತೆರವು ಮಾಡಲು ಮುಂದಾಗಿದ್ದಾರೆ. ಆಗ ಗೋಡೆ ಕುಸಿದಿದೆ. ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಒಬ್ಬರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bidar News: ಮಂಗ ಓಡಿಸಲು ಹೋದ ವೇಳೆ ಹೆಜ್ಜೇನು ದಾಳಿ; ಮರದಿಂದ ಬಿದ್ದು ವ್ಯಕ್ತಿ ಸಾವು

ತುಮಕೂರಲ್ಲಿ ಆಯಿಲ್‌ ಟ್ಯಾಂಕ್ ಸ್ಫೋಟವಾಗಿ ಇಬ್ಬರು ಕಾರ್ಮಿಕರ ದುರ್ಮರಣ, ಮೂವರಿಗೆ ಗಾಯ

ತುಮಕೂರು: ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನ (Tumkur News) ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಫ್ಯಾಕ್ಟರಿ ಇದಾಗಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಆಗ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ | Muda case: ಇಡಿ ವಿಚಾರಣೆಯಿಂದ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ರಿಲೀಫ್‌; ಸಮನ್ಸ್‌ಗೆ ಮಧ್ಯಂತರ ತಡೆ

ತಿರುಮಣಿ ಸೋಲಾರ್ ಪಾರ್ಕ್‌ನಲ್ಲಿ ಬಂಡೆ ಸ್ಫೋಟದ ವೇಳೆ ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ

ಪಾವಗಡ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್‌ನಲ್ಲಿ (Pavagada Solar Park) ಬಂಡೆ ಸ್ಫೋಟದ ವೇಳೆ ಒಬ್ಬ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ರಾಯಚೂರು ಮೂಲದ ಬಸವರಾಜು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಅಚ್ಚಮ್ಮನಹಳ್ಳಿಯ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ವಿವರ:

KSPDCL ನಿಂದ 1002 ಎಕರೆ ಪ್ರದೇಶವನ್ನು ಸೋಲಾರ್ ಪಾರ್ಕ್ ನಿರ್ಮಾಣಕ್ಕೆ JSW ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಪಾರ್ಕ್‌ ನಿರ್ಮಾಣಕ್ಕಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಸಮೀಪದಲ್ಲಿ ಇದ್ದ ಬಸವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದು, ಕಾರ್ಮಿಕ ಶಿವಯ್ಯ ಗಂಭೀರ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದಿಂದ ಅಕ್ಕಪಕ್ಕದ ಜಾಗ ಹಾಗೂ ಬೆಟ್ಟಕ್ಕೂ ಬೆಂಕಿ ಹಬ್ಬಿದ್ದು, ಸ್ಥಳೀಯರು ಆತಂಕಗೊಂಡಿದ್ದರು.

ಈ ಸುದ್ದಿಯನ್ನೂ ಓದಿ | Madhugiri News: ಗ್ರಾಮಸ್ಥರ ಹೆಸರಿನಲ್ಲಿ ಲಕ್ಷ ಲಕ್ಷ ಸಾಲ ಪಡೆದು ದಂಪತಿ ಪರಾರಿ!

ಬಂಡೆ ಬ್ಲಾಸ್ಟ್ ಮಾಡಲು ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಬಳಸಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ KSPSCL ಎಇಇ ಮಹೇಶ್‌, ಗ್ರಾಮಾಂತರ ಸಿಪಿಐ ಗಿರೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.