ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kidnap case: ಯುವಕನನ್ನು ಅಪಹರಿಸಿ ಯುವತಿ ವೇಷ ಹಾಕಿಸಿ ಲೈಂಗಿಕ ಸೇವೆಗೆ ಬಳಕೆ, ಲಿಂಗ ಬದಲಾವಣೆಗೆ ಒತ್ತಡ

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ.

ನಂಜನಗೂಡಿನಲ್ಲಿ ಕರಾಳ ದಂಧೆ

ಮೈಸೂರು, ಏ.13: ಜಿಲ್ಲೆಯಲ್ಲಿ (Mysuru Crime news) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಅಪಹರಿಸಿ (Kidnap case), ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ (harassment) ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ (Nanjanagudu) ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅನಿಲ್ ಕುಮಾರ್‌ಗೆ ಮಂಗಳಮುಖಿ ಅನಿತಾ ಮತ್ತು ತಂಡ ಪರಿಚಯವಾಗಿತ್ತು. ನಂತರ ಆತನನ್ನು ಬಲವಂತವಾಗಿ ಅಪಹರಿಸಿದ ತಂಡ ಮಂಗಳೂರಿಗೆ ಕರೆದೊಯ್ದಿತ್ತು. ಅಲ್ಲಿ ಆತನಿಗೆ ಬಲವಂತವಾಗಿ ಸೀರೆ, ನೈಟಿ ತೊಡಿಸಿ, ಕಿವಿ ಓಲೆ, ಮೂಗುಬೊಟ್ಟು ಹಾಕಿಸಿ ‘ಅಕ್ಷತಾ’ ಎಂದು ಹೆಸರಿಟ್ಟು ಮಂಗಳಮುಖಿಯಾಗಿ ವೇಷ ಬದಲಿಸಿದ್ದರು ಎಂದು ಆರೋಪಿಸಲಾಗಿದೆ.

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ. ಆತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳಮುಖಿ ಎಂದು ಸರ್ಟಿಫಿಕೇಟ್ ಕೊಡಿಸಲಾಗಿದೆ. ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಲಿಂಗ ಬದಲಾವಣೆ ಮಾಡಲು ಈ ತಂಡ ಸ್ಕೆಚ್ ಹಾಕಿತ್ತು ಎನ್ನಲಾಗಿದೆ.

ಮಂಗಳಮುಖಿ ಜತೆ ಪ್ರೀತಿಯಲ್ಲಿದ್ದ ಯುವಕ; ಬಾಡಿಗೆ ಮನೆಯಲ್ಲಿ ಇಬ್ಬರೂ ಅನುಮಾನಾಸ್ಪದ ಸಾವು

ನಂತರ ಇದರಿಂದ ನೊಂದು ಇವರ ಕಪಿಮುಷ್ಠಿಯಿಂದ ಹೊರಬರಲು ನಿರ್ಧರಿಸಿದ ಅನಿಲ್, ತಾನು ದುಡಿದ 3 ಲಕ್ಷ ರೂಪಾಯಿ ಕೇಳಿದಾಗ ಅನಿತಾ ಉಲ್ಟಾ ಹೊಡೆದಿದ್ದಾಳೆ. ತನ್ನ ಮನೆಯಿಂದ 5 ಲಕ್ಷ ರೂಪಾಯಿ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾನೆ ಎಂದು ಸುಳ್ಳು ಕೇಸ್ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ನಂಜನಗೂಡು ಸೇರಿದರೆ, ಅಲ್ಲಿಗೂ ಮಂಗಳಮುಖಿಯರನ್ನು ಕಳಿಸಿ ದಂಧೆಗೆ ಬರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅನಿಲ್ ಅಳಲು ತೋಡಿಕೊಂಡಿದ್ದಾರೆ. ಸುಮಾರು ಶೇ. 90ರಷ್ಟು ದೃಷ್ಟಿ ದೋಷ ಹೊಂದಿರುವ ಅನಿಲ್ ಕುಮಾರ್, ನಂಜನಗೂಡು ಪೊಲೀಸರು ಸ್ಪಂದಿಸದ ಹಿನ್ನೆಲೆಯಲ್ಲಿ ಮೈಸೂರಿನ ಲಷ್ಕರ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

Transgender Bill 2026: ಟ್ರಾನ್ಸ್ ಜೆಂಡರ್ ಮಸೂದೆ 2026ಅನ್ನು ತಿರಸ್ಕರಿಸಲು ಸಹಿ ಸಂಗ್ರಹದ ಮೂಲಕ ಮಂಗಳಮುಖಿಯರ ಒತ್ತಾಯ

ಹರೀಶ್‌ ಕೇರ

View all posts by this author