ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌; ಅ.11ಕ್ಕೆ ನಾಡಹಬ್ಬ ಉದ್ಘಾಟನೆ

ಸಿಎಂ ಡಿಕೆ ಶಿವಕುಮಾರ್ ಅವರ ​ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೈಸೂರು ದಸರಾ ವೇಳಾಪಟ್ಟಿ ಬಗ್ಗೆ ತೀರ್ಮಾನಿಸಲಾಗಿದೆ. ನಾಡಹಬ್ಬದ ರೂಪುರೇಷೆ ಸೇರಿದಂತೆ ಗಜ ಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಈ ಬಾರಿ ದಸರಾದ ಪ್ರಮುಖ ಕಾರ್ಯಕ್ರಮಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2026) ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಸಿಎಂ ಡಿಕೆ ಶಿವಕುಮಾರ್​ (CM DK Shivakumar) ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಾಡಹಬ್ಬದ ರೂಪುರೇಷೆ ಸೇರಿದಂತೆ ಗಜ ಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಈ ಬಾರಿ ದಸರಾದ ಪ್ರಮುಖ ಕಾರ್ಯಕ್ರಮಗಳ ಕುರಿತು ಸಿಎಂ ಡಿಕೆ ಶಿವಕುಮಾರ್​ ಅವರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್‌ 11 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅ.21 ರಂದು ವಿಜಯದಶಮಿ ಜಂಬೂಸವಾರಿ ನಡೆಯಲಿದೆ.ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

ಮುಂಬರುವ ದಿನಗಳಲ್ಲಿ ಸಿಎಂ ಡಿ.ಕೆ. ಶಿವಕುಮಾರ್​ ಅವರು ದಸರಾ ಉದ್ಘಾಟಕರನ್ನು ನೇಮಕ ಮಾಡಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 45 ಕೋಟಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೂಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್‌ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.