Mysuru News: ಮೈಸೂರು ಜೈಲಿನಲ್ಲಿ ಇಬ್ಬರು ಕೈದಿಗಳ ಸಾವು, ಕೇಕ್ ಎಸೆನ್ಸ್ ಸೇವನೆ ಪರಿಣಾಮ
Mysuru News: ಮೈಸೂರು ಜೈಲಿನಲ್ಲಿ ಇಬ್ಬರು ಕೈದಿಗಳ ಸಾವು, ಕೇಕ್ ಎಸೆನ್ಸ್ ಸೇವನೆ ಪರಿಣಾಮ
ಹರೀಶ್ ಕೇರ
January 8, 2025
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಮೈಸೂರು (Mysuru News) ಜೈಲಿನಲ್ಲಿ ಕೇಕ್ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.
ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿತ್ತು. ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಮತ್ತೊಬ್ಬ ಕೈದಿ ರಮೇಶ್ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ED Raid: ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಗೆ ಇಡಿ ದಾಳಿ, ಬೋರ್‌ವೆಲ್ ಹಗರಣ ತನಿಖೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಿನ್ನೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಏಳು ಇಡಿ ಅಧಿಕಾರಿಗಳ ತಂಡ ಕೇಂದ್ರ ಕಚೇರಿಯಲ್ಲಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರ ಕಚೇರಿಯಲ್ಲಿ ಶೋಧ ನಡೆಸಿದೆ.
2016ರಲ್ಲಿ ನಡೆದಿದೆ ಎನ್ನಲಾದ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 960 ಕೋಟಿ ರೂಪಾಯಿ ಪೈಕಿ 400 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು ಇದೇ ಅವಧಿಯಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಎಇ, ಎಇಇಗಳನ್ನೂ ವಿಚಾರಣೆ ನಡೆಸಲಾಗುತ್ತಿದೆ.
ದಾಳಿ ವೇಳೆ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಸಂಗ್ರಹಿಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯ ನಿಬಂಧನೆಗಳ ಅಡಿಯಲ್ಲಿ ಬಿಬಿಎಂಪಿಗೆ ಸಂಬಂಧಿಸಿದ ಸುಮಾರು ಆರು ಕಚೇರಿಗಳನ್ನು ಶೋಧಿಸಲಾಗಿದೆ. 2016ರಿಂದ 2019ರ ನಡುವೆ ಬೋರ್‌ವೆಲ್ ಮತ್ತು ಆರ್‌ಒ ಪ್ಲಾಂಟ್‌ಗಳ ಬಗ್ಗೆ 2020ರ ಜೂನ್ 16ರಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ರಮೇಶ್ ತಿಳಿಸಿದರು.