ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Electrocution: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

Mysuru News: ಮೃತರನ್ನು ತಾಯಿ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ.

ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

ಹುಣಸೂರಿನಲ್ಲಿ ವಿದ್ಯುತ್‌ ಸ್ಪರ್ಶಿಸಿ ತಾಯಿ ಮಗ ಸಾವು -

ಹರೀಶ್‌ ಕೇರ ಹರೀಶ್‌ ಕೇರ Oct 29, 2025 9:24 AM

ಮೈಸೂರು: ಸೂಕ್ತ ಸುರಕ್ಷತಾ ಕ್ರಮಗಳಿಲ್ಲದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೃತಪಡುತ್ತಿರುವವರ (Electrocution) ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ರಾಜ್ಯದಲ್ಲಿ ಅಂಥದೊಂದು ಘೋರ ದುರಂತ ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ (Hunasur) ನಡೆದಿದೆ. ಮೈಸೂರು (Mysuru news) ಜಿಲ್ಲೆಯ ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರು ಸ್ಥಳದಲ್ಲೇ (Death) ಸಾವನ್ನಪ್ಪಿದ್ದಾರೆ.

ಮೃತರನ್ನು ತಾಯಿ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದದು, ಸ್ಥಳಕ್ಕೆ ಪೊಲೀಸ್‌ ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇನ್‌ಸ್ಟಾದಲ್ಲಿ ಬಾಲಕಿಯ ಪರಿಚಯಿಸಿಕೊಂಡು ಕಿರುಕುಳ, ಮೂವರ ಸೆರೆ

ಹಾನಗಲ್:‌ ಇನ್‌ಸ್ಟಾಗ್ರಾಂನಲ್ಲಿ ಪರಿಚಿತವಾದ 10ನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಹಾನಗಲ್‌ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಹಾಗೂ ಅವರಿಗೆ ಸಹಾಯ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. 10ನೇ ತರಗತಿಯ ಓದುತ್ತಿದ್ದ ಬಾಲಕಿಗೆ ಆರೋಪಿ ಉದಯ್‌ ಎಂಬಾತ ಇನ್‌ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದ. ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡು ಪ್ರೀತಿ ಮಾಡುವುದಾಗಿ ನಂಬಿಸಿ, ಮೂಡೂರ ಗ್ರಾಮದ ಮರಿಯಮ್ಮ ಜಾತ್ರೆಗೆ ಹೋದಾಗ, ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಮಾಡಿದ್ದಲ್ಲದೆ ತನ್ನ ದೊಡ್ಡಪ್ಪನ ಜಮೀನಲ್ಲಿಯೂ ಮತ್ತೊಮ್ಮೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅನಂತರ ದಿನಗಳಲ್ಲಿ ಅವರಿಬ್ಬರೂ ದೂರವಾಗಿದ್ದರು.

ಇದನ್ನೂ ಓದಿ: Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

2025ರ ಏಪ್ರಿಲ್‌ನಲ್ಲಿ ಇದೇ ಬಾಲಕಿಯನ್ನು ಇನ್ನೊಬ್ಬ ಆರೋಪಿ ಕಿಶನ್ ಎಂಬಾತ ಬಾಲಕಿಯನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು, ಎರಡು ಬಾರಿ ದೈಹಿಕ ಸಂಪರ್ಕ ಮಾಡಿದ್ದ. ಅನಂತರ ಈತನ ಸ್ನೇಹಿತರಾದ ಆಕಾಶ ಪರಶುರಾಮ ಮಂತಗಿ ಮತ್ತು ಚಂದ್ರು ಬಾಲಕಿಯನ್ನು ಕಿಶನ್‌ನೊಂದಿಗೆ ಹೋಗಲು ಸಹಾಯ ಮಾಡಿದ್ದಲ್ಲದೆ, ಬಾಲಕಿಗೆ ಅವಾಚ್ಯವಾಗಿ ನಿಂದಿಸಿದ್ದರು. ಇದಾದ ಬಳಿಕ ಬಾಲಕಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಾಗ ಆಕೆ 8 ತಿಂಗಳ ಗರ್ಭಿಣಿಯಾಗಿರುವ ಬಗ್ಗೆ ವೈದ್ಯರಿಂದ ತಿಳಿದುಬಂದಿದೆ. ಈ ಕುರಿತು ಅ. 22ರಂದು ಬಾಲಕಿಯ ತಾಯಿ ನೀಡಿದ ದೂರಿನ ನೀಡಿದ ಮೇರೆಗೆ ಹಾನಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.