Mysuru News: ಅರ್ಥಪೂರ್ಣ, ಅದ್ಧೂರಿಯಾಗಿ ಬಸವಣ್ಣ ಜಯಂತಿ ಆಚರಣೆ: ಡಾ.ಪಿ.ಶಿವರಾಜು
Mysuru News: ಏಪ್ರಿಲ್ 30 ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ನಗರದ ಗನ್ ಹೌಸ್ ಸರ್ಕಲ್‌ನಲ್ಲಿನ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಬೆಳಗ್ಗೆ 11 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ.


ಮೈಸೂರು: ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭಾವರ, ಸಾಧಕರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದರು. ಇಂದು ನಗರದ (Mysuru News) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬಸವಣ್ಣನವರ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏಪ್ರಿಲ್ 30 ರಂದು ಬೆಳಗ್ಗೆ 10 ಗಂಟೆಗೆ ಗನ್ ಹೌಸ್ ಸರ್ಕಲ್‌ನಲ್ಲಿನ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಬೆಳಗ್ಗೆ 11 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಗನ್ ಹೌಸ್ ಸರ್ಕಲ್‌ನಲ್ಲಿನ ಬಸವೇಶ್ವರರ ಪ್ರತಿಮೆಯ ಸ್ಥಳದ ಆವರಣದಲ್ಲಿ ಶಾಮಿಯಾನ ಹಾಗೂ ಚೇರ್‌ಗಳ ವ್ಯವಸ್ಥೆ ಹಾಗೂ ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸೂಚನೆ ನೀಡಿದರು.
ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ಸುದರ್ಶನ್ ಮಾತನಾಡಿ, ಜಯಂತಿ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ವಚನ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | BMRCL Recruitment 2025: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಸಭೆಯಲ್ಲಿ ಸಮುದಾಯದ ಮುಖಂಡರಾದ ಕೆ.ಎನ್. ಪುಟ್ಟಬುದ್ಧಿ, ಮೂಗೂರು ನಂಜುಂಡಸ್ವಾಮಿ, ಬಿ.ಕೆ. ನಾಗರಾಜ್, ಬಾಬು ಹಾಗೂ ಶಿವಶಂಕರ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.