ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

MUDA Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ಕ್ಲೀನ್​ಚಿಟ್ ನೀಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ವರದಿಯಲ್ಲ ತಿಳಿಸಲಾಗಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌

ಮುಖ್ಯಮಂತ್ರಿ ಸಿದ್ದರಾಮಯ್ಯ.

Profile Ramesh B Feb 19, 2025 4:54 PM

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ (MUDA Scam)ಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ತಮ್ಮ ವರದಿಯನ್ನು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಈ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತ ದೂರುದಾರ ಸ್ನೇಹಮಯಿ‌ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ತಿಳಿಸಿದೆ.

ಸಾಕ್ಷ್ಯಾಧಾರಗಳ ಕೊರತೆ ಇರುವುದು ಕಂಡು ಬಂದಿದೆ ಎಂದು ಕೋರ್ಟ್‌ ಹೇಳಿದೆ. ಜತೆಗೆ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ಇನ್ನು ಈ ನೋಟಿಸ್‌ ತಲುಪಿದ 1 ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆಕ್ಷೇಪ ವ್ಯಕ್ತಿಪಡಿಸಬಹುದು ಎಂದು ಸೂಚಿಸಿದೆ.

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಹೈಕೋರ್ಟ್​ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇದೀಗ ಲೋಕಾಯುಕ್ತ ಸಹ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಸೇರಿದಂತೆ ಉಳಿದ ಇಬ್ಬರಿಗೂ ರಿಲೀಫ್ ಸಿಕ್ಕಂತಾಗಿದೆ. ಈ ಪ್ರಕರಣದಿಂದ ಸಾರ್ವಜನಿಕವಾಗಿ ಸಿದ್ದರಾಮಯ್ಯ ಅವರು ಸಾಕಷ್ಟು ಮುಜುಗರಕ್ಕೆ ಒಳಗಾಗಿದ್ದರು.

ಲೋಕಾಯುಕ್ತ ವಿರುದ್ಧ ಆಕ್ರೋಶ

ಮುಡಾ ಕೇಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ನೀಡಿ ಬಿ ರಿಪೋರ್ಟ್‌ ಸಲ್ಲಿಸಲು ಸಿದ್ಧತೆ ನಡೆಸಿರುವ ಮೈಸೂರು ಲೋಕಾಯುಕ್ತ ಪೊಲೀಸರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್‌ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನೂ ಓದಿ: MUDA Scam: ಮುಡಾ ಹಗರಣ; ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿಗಳ ಮುಟ್ಟುಗೋಲು

ಏನಿದು ಪ್ರಕರಣ?

ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪತ್ನಿ ಬಿ.ಎಂ.ಪಾರ್ವತಿ ಅವರ ಹೆಸರಿನಲ್ಲಿ 14 ನಿವೇಶನಗಳಿಗೆ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.