ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Power Men Death: ಕರ್ತವ್ಯದ ವೇಳೆ ಪವರ್‌ ಮ್ಯಾನ್‌ ಸಾವು; ಸೆಸ್ಕ್ ವತಿಯಿಂದ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ ಸರ್ಕಾರ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ.

ಮೈಸೂರು: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು (Power Men Death) ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ ಸರ್ಕಾರ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ. ಮೈಸೂರಿನ (Mysuru) ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡು ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಇಂಜಿನಿಯರ್ ಸುನೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯುತ್ ಶಾಕ್ ನಿಂದ ಯುವ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿತ್ತು. ವಿದ್ಯುತ್ ಲೈನ್ ದುರಸ್ತಿಗೆ ಕಂಬ ಹತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಂಬ ಹತ್ತಿ ಫ್ಯೂಸ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ.

ಈ ಸುದ್ದಿಯನ್ನೂ ಓದಿ: Robin Kaye: ಅಮೆರಿಕನ್‌ ಐಡಲ್ ರಿಯಾಲಿಟ್‌ ಶೋ ಖ್ಯಾತಿಯ ರಾಬಿನ್ ಕೇಯ್ ದಂಪತಿ ನಿಗೂಢ ಸಾವು-ಕೊಲೆ ಶಂಕೆ!

ಕೆಳಗೆ ಬಿದ್ದು ಒದ್ದಾಡುತ್ತಿದ್ದ ಪ್ರವೀಣ್ ಅವರನ್ನು ಸ್ಥಳಿಯರು ಹಾಗೂ ಸಿಬ್ಬಂದಿಗಳು ಸೇರಿ ಆಸ್ಪತ್ರೆಗೆ ಸಾಗಿಸಿದರೂ ತೀವ್ರ ಅಸ್ವಸ್ಥತನಾಗಿದ್ದ ಪ್ರವೀಣ್ ಮಾರ್ಗ ಮಧ್ಯೆ ಕೊನೆಯುಸಿರೆಳೆದರು. ಮೂಲತಃ ಬಾಗಲಕೋಟೆಯವರಾದ ಪ್ರವೀಣ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.