ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿಯ ದುರಂತ ಅಂತ್ಯ: ಮೈಸೂರಿನಲ್ಲಿ ಯುವತಿ, ಕೇರಳದಲ್ಲಿ ಯುವಕ ಆತ್ಮಹತ್ಯೆ!

ಪ್ರೀತಿಸಿ ಮದುವೆಯಾಗಲು ಸಿದ್ಧಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೇರಳದಲ್ಲಿ ಯುವಕ ಸಾವಿಗೆ ಶರಣಾಗಿದ್ದಾನೆ.

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿ ದುರಂತ ಅಂತ್ಯ!

-

Prabhakara R
Prabhakara R Aug 14, 2026 5:24 PM

ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಎಸ್‌ಬಿಐ ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ (SBI Employees Suicide) ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಹಾಗೂ ಕೇರಳದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಈ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬಸ್ಥರಿಗೆ ಆಘಾತ ಮೂಡಿಸಿದೆ.

ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಮೃತ ಯುವತಿ. ಇತ್ತೀಚೆಗಷ್ಟೇ ಎಸ್‌ಬಿಐ ಉದ್ಯೋಗಕ್ಕೆ ಸೇರಿದ್ದ ಅನುಶ್ರೀ, ತರಬೇತಿ ವೇಳೆ ಕೇರಳದ ಎರ್ನಾಕುಲಂನ ಎಸ್‌ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇರಿಟ್ಟಿ ಮೂಲದ ಅಮಲ್ ಎಂಬ ಯುವಕನ ಪರಿಚಯವಾಗಿತ್ತು. ಪರಿಚಯ ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಮದುವೆ ಕೂಡ ನಿಶ್ಚಯವಾಗಿತ್ತು.

ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಅನುಶ್ರೀ ಮೈಸೂರು ಜಿಲ್ಲೆಯ ಹುಣಸೂರು ನಗರದ ಸುಬ್ಬಣ್ಣ ಬಡಾವಣೆಯಲ್ಲಿ ವಾಸವಾಗಿದ್ದರು. ಘಟನೆಗೂ ಮುನ್ನ ತಂದೆ-ತಾಯಿ ಹಾಗೂ ಸಹೋದರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಅಂತ್ಯಕ್ರಿಯೆಗೆ ನಟ ಯಶ್ ಅಂದು ಹೋಗಲಿಲ್ಲ ಏಕೆ? ಕಾರಣ ಬಹಿರಂಗಪಡಿಸಿದ ʻರಾಕಿ ಭಾಯ್ʼ!‌

ಅನುಶ್ರೀ ಹಾಗೂ ಅಮಲ್ ನಡುವೆ ಫೋನ್‌ನಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ. ಈ ಜಗಳದಿಂದ ಬೇಸತ್ತು ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪ್ರಾಥಮಿಕವಾಗಿ ತಿಳಿದುಬಂದಿದೆ. ಅನುಶ್ರೀ ಸಾವಿನ ವಿಚಾರ ತಿಳಿದ ಬಳಿಕ ಅಮಲ್ ಕೂಡ ತೀವ್ರ ಮನನೊಂದು ಕೇರಳದ ಇರಿಟ್ಟಿ ನಗರದ ಲಾಡ್ಜ್‌ನಲ್ಲಿ ರೂಂ ಪಡೆದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.