Self Harming: ರಾಜ್ಯದಲ್ಲಿ ಮೀಟರ್ ಬಡ್ಡಿದಂಧೆಗೆ ಮತ್ತೊಂದು ಬಲಿ, ಯುವಕ ಆತ್ಮಹತ್ಯೆ
ಮೀಟರ್ ಬಡ್ಡಿ ದಂಧೆಯನ್ನು ಮಟ್ಟಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದ ದಿನವೇ ಈ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ

ಮಂಡ್ಯ: ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮೀಟರ್ ಬಡ್ಡಿ (Micro Finance) ದಂಧೆಗೆ ಮತ್ತೊಂದು ಬಲಿಯಾಗಿದೆ. ಮಂಡ್ಯ (Mandya News) ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಸಾಲ ನೀಡಿದವರ ಕಿರುಕುಳದಿಂದ ನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ.
ಮೀಟರ್ ಬಡ್ಡಿ ದಂಧೆಯನ್ನು ಮಟ್ಟಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದ ದಿನವೇ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಯುವಕ ನವೀನ್ ಎಂಬಾತ ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂ. ಸಾಲ ಮಾಡಿದ್ದ. ಬಳಿಕ ಸಾಲಗಾರರ ಕಿರುಕುಳದಿಂದ ನೊಂದು ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋ ಬಿಪಿಯಿಂದ 7ನೇ ತರಗತಿ ವಿದ್ಯಾರ್ಥಿ ಸಾವು
ನಂಜನಗೂಡು: ಹೃದಯ ವೈಫಲ್ಯದಿಂದ ಸಣ್ಣ ಮಕ್ಕಳು ಸಾಯುತ್ತಿರುವ ಸುದ್ದಿಗಳ ನಡುವೆಯೇ, ಲೋ ಬಿಪಿಯಿಂದಾಗಿ ಬಾಲಕನೊಬ್ಬ ಮೃತಪಟ್ಟ ಘೋರ ಘಟನೆ ನಂಜನಗೂಡಿನಿಂದ ವರದಿಯಾಗಿದೆ.
ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.
ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಇದನ್ನೂ ಓದಿ: Murder Case: ಬೆಂಗಳೂರಲ್ಲಿ ಹೇಯ ಕೃತ್ಯ; ಬಾಂಗ್ಲಾ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಹತ್ಯೆ