ಮೈಸೂರು: ಗಣೇಶ ಮೆರವಣಿಗೆ ಕುರಿತು ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿದ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇನ್‌ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ (BJP Protest in T Narasipura) ಮುಂದಾದ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿ ಹಲವು ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಿ.ನರಸೀಪುರದ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಈ ವಿಡಿಯೊ ವೈರಲ್ ಆದ ಬಳಿಕ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

T. Narasipur Ganesha festival: ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಯಾವುದೇ ನಿರ್ಬಂಧವಿಲ್ಲ: ಎಸ್‌ಪಿ ಬಾಲದಂಡಿ
ಇನ್‌ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತು ಮಾಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಯನ್ನು ಅಮಾನತು ಮಾಡುವವರೆಗೂ ಅಹೋರಾತ್ರಿ ಧರಣಿ ನಡೆಸುವುದಾಗಿ ಪಟ್ಟುಹಿಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.