Shivraj Singh Chauhan: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಎನ್.ಚಲುವರಾಯಸ್ವಾಮಿ ಮನವಿ: ಕೇಂದ್ರದ ಸಮ್ಮತಿ
ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾನ್ ವರನ್ನು ಭೇಟಿ ಮಾಡಿ, ಮನವಿ ಅರ್ಪಿಸಿ ಚಲುವರಾಯಸ್ವಾಮಿರವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು.
Source : Mysore Digital Reporter
ಬೆಂಗಳೂರು: ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.
ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾನ್ ವರನ್ನು ಭೇಟಿ ಮಾಡಿ, ಮನವಿ ಅರ್ಪಿಸಿ ಚಲುವರಾಯಸ್ವಾಮಿರವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು.
ರಾಜ್ಯದಲ್ಲಿ ಕೃಷಿ ಇಲಾಖೆ ಶೇಕಡಾ 99 ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿ ದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇಕಡಾ 124ರಷ್ಟು ಅನುದಾನ ಬಳಸಿ ಕೊಂಡಿದೆ. ಈ ಹಿನ್ನಲೆಯಲ್ಲಿ ಈ ಭಾರಿಯೂ ಇದೆ ರೀತಿ ಹಣಕಾಸಿನ ನೆರವು ಒದಗಿಸ ಬೇಕೆಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಭಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲ್ಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಪೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು.
ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಅವರು ಜ23 ರಿಂದ ಜ25 ರವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌವ್ಹಾನ್ರನ್ನು ಅಹ್ವಾನಿಸಿ ದರು.
ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿ ನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನು (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಗೊಳಿಸಬೇಕೆಂದು ಚಲುವರಾಯಸ್ವಾಮಿರವರು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು.
ಈ ಹಿಂದೆ ಜಾರಿಗೆ ಬಂದ ಆತ್ಮ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ನಂತರ ಹೆಚ್ಚುವರಿಯಾಗಿ 59 ತಾಲ್ಲೂಕುಗಳು ರಚನೆಯಾಗಿರುವುದರಿಂದ ಹೊಸದಾಗಿ 177 ಸಹಾಯಕ ತಾಂತ್ರಿಕ ನಿರ್ವಾಹಕರು ಅಗತ್ಯವಿದ್ದು ಅದಕ್ಕೆ ಮಂಜೂರಾತಿ ಯೊಂದಿಗೆ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿ ಕೋರಿದರು.
ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದು ಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿ.ಎಂ.ಕೆ.ಎಸ್.ವೈ – ಪಿ.ಡಿ.ಎಂ.ಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಚಲುವರಾಯಸ್ವಾಮಿರವರು ಕೇಂದ್ರ ಸಚಿವರ ಗಮನ ಸೆಳೆದರು.
ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿ ಯಲ್ಲಿದ್ದು, ಈಗಾಗಲೇ ವಿಶ್ವಬ್ಯಾಂಕ್ ನೆರವಿನೊಂದಿಗೆ ರೂ.567.98 ಕೋಟಿಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನ ಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆ ಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾನ್ ಅವರು ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.
ಆರ್ಥಿಕ ವರ್ಷ ಕೊನೆಯಾಗುತ್ತಿದ್ದು, ಒದಗಿಸುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ ಹಣ ಸದ್ಭಳಕೆ ಪ್ರಮಾಣ ಪತ್ರವನ್ನು ನೀಡಿದ ಕೂಡಲೇ ಕೃಷಿ ಹಾಗೂ ಇತರೆ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಗಳನ್ನು ಸಹ ಒದಗಿಸಲಾಗುವುದು ಎಂದು ಶಿವರಾಜ್ ಸಿಂಗ್ ಚೌವ್ಹಾನ್ ಹೇಳಿದರು.
ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: Mysore News: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿ ಯೊಬ್ಬರ ಜವಾಬ್ದಾರಿ: ಪ್ರೊ ಶರಣಪ್ಪ ವಿ ಹಲಸೆ