ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಿಎಂ ಬದಲಾವಣೆ ವಿಚಾರ; ಬಜೆಟ್‌ ಬೆನ್ನಲ್ಲೇ ಶಾಕಿಂಗ್‌ ಹೇಳಿಕೆ ನೀಡಿದ ಸಿದ್ದರಾಮಯ್ಯ!

Karnataka CM row: ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ವೇಳೆ ಮಾಧ್ಯಮಗಳ ಜತೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಇನ್ನೆರಡು ಬಜೆಟ್‌ ನೀವೇ ಮಂಡಿಸುತ್ತೀರಾ ಎಂಬ ಪ್ರಶ್ನೆಗೆ ಅವರು ನೀಡಿರುವ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವರುಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಈ ಮೊದಲು ಪೂರ್ಣಾವಧಿಯಾಗಿ ನಾನೇ ಮುಖ್ಯಮಂತ್ರಿಯಾಗಿ (Karnataka CM row) ಮುಂದುವರಿಯುವೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಹೈಕಮಾಂಡ್‌ ಅವಕಾಶ ಕೊಟ್ಟರೆ ಮುಂದುವರಿಯುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವರುಣಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದ್ದಾರೆ. ಈ ವೇಳೆ ಇನ್ನೆರಡು ಬಜೆಟ್‌ ನೀವೇ ಮಂಡಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ನಾನು 17ನೇ ಬಜೆಟ್‌ ಮಂಡಿಸಿದ್ದೇನೆ. ಕರ್ನಾಟಕದಲ್ಲಿ ಇದೇ ಅತಿ ಹೆಚ್ಚು. ಹೈಕಮಾಂಡ್‌ ಅವಕಾಶ ಕೊಟ್ಟರೆ ಇನ್ನೆರಡು ಬಜೆಟ್‌ ಮಂಡಿಸುತ್ತೇನೆ.

ರೆಕಾರ್ಡ್‌ ಮುರಿಯುವುದು ಮುಖ್ಯವಲ್ಲ. ಹೈಕಮಾಂಡ್‌ ಬಿಡು ಅಂದ್ರೆ ಬಿಡ್ತೀನಿ, ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಅಂತಿಮವಾಗಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ.

ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು

ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್‌ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್‌ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ.

ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ಇದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ. ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು, ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿದೆ

ಬಿಜೆಪಿಯ ಅಶೋಕ್ ಅವರು ಈ ಬಾರಿಯ ಬಜೆಟ್ ಒಂದು ವರ್ಗಕ್ಕೆ ಸೀಮಿತಗೊಳಿಸಿರುವ ಬಜೆಟ್ ಆಗಿದೆ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಈ ಬಾರಿಯ ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ಮಾಡಲಾಗಿದ್ದು ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಲಾಗುತ್ತದೆ, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ ಎಂದರು.

Karnataka Budget 2026: ಶಾಶ್ವತ ನೀರಾವರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಯೋಜನೆ ಘೋಷಣೆ ಬಗ್ಗೆ ಚಕಾರ ಎತ್ತದಿರುವುದು 17ನೇ ಬಜೆಟ್ ವಿಶೇಷ

ಕೇಂದ್ರದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟ

ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾಗಿದ್ದ ಅನುದಾನವನ್ನು ನೀಡದಿರುವುದರಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರದ ಜಿಎಸ್ ಟಿ ದರಪರಿಷ್ಕರಣೆಯಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟವಾಗಿದೆ ಎಂದರು.