Actor Ram Charan: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತೆಲುಗು ನಟ ರಾಮ್ ಚರಣ್
Peddi Movie: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಪೆದ್ದಿ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಮೈಸೂರಿನಲ್ಲಿ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ.

-

ಮೈಸೂರು: ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಅವರು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಮೈಸೂರಿನಲ್ಲಿ ಪೆದ್ದಿ (Peddi Movie) ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್ ಚರಣ್, ಮೈಸೂರು ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ನಟ ಗೌರವಿಸಿದರು. ನಟ ರಾಮ್ ಚರಣ್‌ಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಶಾಲು ಹೊದಿಸಿ, ಹೂ ಗುಚ್ಛ ನೀಡಿ ಸನ್ಮಾನಿಸಿದ್ದಾರೆ. ಈ ವೇಳೆ ಸಚಿವ ಸಂತೋಷ್ ಲಾಡ್ ಮತ್ತಿತರರು ಇದ್ದರು. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ ಹಬ್ಬದ ನಡುವೆಯೇ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ.

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಪೆದ್ದಿ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
#WATCH | Actor Ram Charan meets Karnataka Chief Minister Siddaramaiah in Mysuru
— ANI (@ANI) August 31, 2025
(Source: CMO) pic.twitter.com/iXTbn8ALpg
ಮೈಸೂರಿನಲ್ಲಿ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ. 1000 ಡ್ಯಾನ್ಸರ್ಸ್ ಜತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್‌ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗುತ್ತಿದೆ.
ಉಪ್ಪೆನ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Peddi Movie: 40 ವರ್ಷದ ರಾಮ್ ಚರಣ್ ತಾಯಿ ಪಾತ್ರಕ್ಕೆ 33 ವರ್ಷದ ಸ್ವಾಸಿಕಾಗೆ ಆಫರ್; ʼಪೆದ್ದಿʼ ಚಿತ್ರದ ಬಗ್ಗೆ ನಟಿ ಹೇಳಿದ್ದೇನು?
ಈ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನೀಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ನಡಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಚಿತ್ರ ಪ್ರೆಸೆಂಟ್ ಮಾಡುತ್ತಿದ್ದಾದೆ. ಆರ್. ರತ್ನವೇಲು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ. 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.