ಮೈಸೂರು: ಮುಡಾ ಅಕ್ರಮ ಪ್ರಕರಣದಲ್ಲಿ (Muda Case) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಮತ್ತು ದಿನೇಶ್‌ಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆಗೆ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ, ದಿನೇಶ್‌ಕುಮಾರ್ ವಿರುದ್ಧ ಮಾತ್ರ ತನಿಖೆ ನಡೆಸಲು ಸರ್ಕಾರ ಅನುಮತಿ ಕೊಟ್ಟಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿನೇಶ್ ಅವರಿಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ಅಸಮಾಧಾನ ಹೊರಹಾಕಿದೆ. ಆರು ತಿಂಗಳಿಂದ ಯಾವುದೇ ಪ್ರಗತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಅನುಮತಿ ತಡವಾಗುತ್ತಿದೆ ಎಂದು ಹೇಳಲಾಗಿದೆ.
ಈ ನಡುವೆ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ, ಮಾನಸಿಕವಾಗಿಯೂ ಕುಗ್ಗಿದ್ದೇನೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆಗ್ರಹಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಸುದ್ದಿಯನ್ನೂ ಓದಿ | ಮುಡಾ ಅಕ್ರಮ ತನಿಖಾ ನಡೆ ಬಿಜೆಪಿ ಕಡೆ
ಈ ಸಂದರ್ಭದಲ್ಲಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಾಗಿಲ್ಲ ಎಂದು ಸ್ನೇಹಮಯಿ ಕೃಷ್ಣ ವಕೀಲರು ವಾದ ಮಂಡಿಸಿದ್ದಾರೆ. ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 29ಕ್ಕೆ ಮುಂದೂಡಿದೆ.