Stabbing case: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ; ಚಿಕಿತ್ಸೆ ಫಲಿಸದೇ ಯುವತಿ ಸಾವು
Stabbing case: ಪಾರ್ಕ್ ಮುಂಭಾಗದಲ್ಲಿಯುವತಿ ಜತೆ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಯುವಕ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ. ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೈಸೂರು: ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪರಿಣಾಮ ಯುವತಿ ಮೃತಪಟ್ಟಿರುವ ಘಟನೆ (Stabbing case) ನಗರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಪೂರ್ಣಿಮಾ (36) ಮೃತ ಯುವತಿ. ಅಭಿಷೇಕ್ ಕೊಲೆ ಆರೋಪಿ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಯುವತಿ ಪೂರ್ಣಿಮಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆರೋಪಿ ಅಭಿಷೇಕ್ ತಲೆಮರೆಸಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಅಂಬೇಡ್ಕರ್ ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿಆಕೆಗೆ ಚಾಕುವಿನಿಂದ ಇರಿದಿದ್ದಾನೆ.
ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ.
ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬುವರ ಪುತ್ರ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸಂತ್ರಸ್ತ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್ನಲ್ಲಿ ಓದುವಾಗ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಮಂಗಳೂರಿನ ಖಾಸಗಿ ಕಾಲೇಜಿಗೆ ಸೇರಿಕೊಂಡಿದ್ದರು. 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಯಲ್ಲಿ ಯಾರೂ ಇಲ್ಲದಾಗ ಯುವತಿಯನ್ನು ಮನೆಗೆ ಕರೆಸಿಕೊಂಡು ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಇದರಿಂದ ತಾನು ಗರ್ಭಿಣಿ ಆಗಿರುವ ವಿಚಾರವನ್ನು ಯುವತಿ ಕೃಷ್ಣ ರಾವ್ ಗೆ ತಿಳಿಸಿದ್ದಳು. ಇದರಿಂದ ಮದುವೆಯಾಗಲು ಕೃಷ್ಣ ರಾವ್ ನಿರಾಕರಿಸಿದ್ದ.
ಇದರಿಂದ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದ. ಪುತ್ತೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಈ ಸುದ್ದಿಯನ್ನೂ ಓದಿ | Praveen Nettaru murder case: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ
ಆರೋಪಿ ಶ್ರೀಕೃಷ್ಣ ಜೆ.ರಾವ್ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರು, ಪುತ್ರನಿಗೆ ಜೂ.23ಕ್ಕೆ 21 ವರ್ಷ ತುಂಬಿದ ಬಳಿಕ ವಿವಾಹ ಮಾಡಿಕೊಡುವುದಾಗಿ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು. ಒಂದು ವೇಳೆ ಮಗ ವಿವಾಹಕ್ಕೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಬಹುದೆಂದೂ ತಿಳಿಸಿದ್ದರು. ಆದರೆ ನಂತರ ಸಂತ್ರಸ್ತೆಯನ್ನು ವಿವಾಹವಾಗಲು ಯುವಕ ಒಪ್ಪದ ಹಿನ್ನೆಲೆಯಲ್ಲಿ ಜು.24ರಂದು ಸಂತ್ರಸ್ತ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.