ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka’s longest-serving CM: ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ; ಜನರ ಆಶೀರ್ವಾದವೇ ಕಾರಣ ಎಂದ ಸಿದ್ದರಾಮಯ್ಯ

Longest serving CM of Karnataka: ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ಮಾಡಿರುವ ಬಗ್ಗೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ.

ಬೆಂಗಳೂರು, ಡಿ.5: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ಅರಸುರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ಮಾಡಿರುವ ಬಗ್ಗೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ಹೇಳಿದರು.

ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು. ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ ಎಂದ ಅವರು, ರಾಜ್ಯಕ್ಕೆ ಜಿಎಸ್‌ಟಿಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸಣ್ಣ ರೈತರು, ಬಡ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳು ಕಡಿಮೆಯಾಗಲಿದೆ. ಈ ಮೂಲಕ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3,000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದು ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂಉ ಹೇಳಿದರು.

CM Siddaramaiah: ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ, ಬಜೆಟ್‌ನಲ್ಲೂ ರೆಕಾರ್ಡ್‌

ಹೀಲಿಯಂ‌ ಸ್ಫೋಟ; ಮೃತ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರ

ಮೈಸೂರಿನ ಅರಮನೆಯ ಮುಂಭಾಗದಲ್ಲಿ ಹೀಲಿಯಂ‌ ಸಿಲಿಂಡರ್ ಸ್ಫೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಸಿಎಂ ಘೋಷಿಸಿದರು.