ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮೈಸೂರಿನಲ್ಲಿ ಬಲೂನ್‌ಗೆ ಗಾಳಿ ತುಂಬುವಾಗ ನೈಟ್ರೋಜನ್‌ ಸಿಲಿಂಡರ್‌ ಸ್ಫೋಟ; ಒಬ್ಬ ಸಾವು, ನಾಲ್ವರಿಗೆ ಗಾಯ

Nitrogen cylinder explodes in Mysuru: ಮೈಸೂರು ಅರಮನೆ ಬಳಿ ಬೀದಿ ಬದಿ ವ್ಯಾಪಾರಿ, ಸೈಕಲ್‌ನಲ್ಲಿ ಬಲೂನ್‌ ಮಾರುತ್ತಿದ್ದರು. ಈ ವೇಳೆ ಬಲೂನ್‌ಗೆ ಗಾಳಿ ತುಂಬುವಾಗ ದುರಂತ ನಡೆದಿದೆ. ಸ್ಥಳಕ್ಕೆ ಕಮಿಷನರ್‌ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸಾಂದರ್ಭಿಕ ಚಿತ್ರ

ಮೈಸೂರು: ಬಲೂನ್‌ಗೆ ಗಾಳಿ ತುಂಬುವಾಗ ನೈಟ್ರೋಜನ್ ಸಿಲಿಂಡರ್‌ ಸ್ಫೋಟಗೊಂಡು (Nitrogen cylinder explodes in Mysuru) ಒಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು ಮೈಸೂರು ಅರಮನೆ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಲೂನ್‌ಗೆ ಗಾಳಿ ತುಂಬುವಾಗ ಗುರುವಾರ ರಾತ್ರಿ ದುರಂತ ನಡೆದಿದ್ದು, ಸೈಕಲ್‌ನಲ್ಲಿ ಬಲೂನ್‌ ಮಾರುತ್ತಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕೋಲ್ಕತಾ ಮೂಲದ ಶಬ್ಬೀರ್‌, ಬೆಂಗಳೂರು ಮೂಲದ ಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಇವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ತೀವ್ರತೆಗೆ ದೇಹ ಛಿದ್ರಛಿದ್ರವಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್‌‌ ಸೇರಿ ವಿವಿಧ ಪೊಲೀಸ್‌ ಅಧಿಕಾರಿಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು; ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ

ಚಿಕ್ಕಬಳ್ಳಾಪುರದಲ್ಲಿ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ನಾಲ್ವರ ಸಾವು

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಗುರುವಾರ ಸಾವಿನ ಸರಣಿ ಮುಂದುವರಿದಿದ್ದು, ಟಿಪ್ಪರ್‌ ಡಿಕ್ಕಿಯಾಗಿ ಬೈಕ್‌ನಲ್ಲಿ ಸಾಗುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur Road Accident) ತಾಲೂಕಿನ ಅಜ್ಜವಾರ ಗೇಟ್‌ ಬಳಿ ನಡೆದಿದೆ. ಟಿಪ್ಪರ್‌- ಬೈಕ್‌ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಮನೋಜ್, ನರಸಿಂಹ ಮೂರ್ತಿ, ಅರುಣ್, ನಂದೀಶ್ ಮೃತರು. ಇವರೆಲ್ಲಾ ಕೃಷಿ ಕೂಲಿ ಕಾರ್ಮಿಕರಾಗಿದ್ದರು. ಒಂದೇ ಬೈಕ್‌ನಲ್ಲಿ ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಅಜ್ಜವಾರಕ್ಕೆ ತೆರಳುತ್ತಿದ್ದರು. ಅಜ್ಜವಾರ ಗೇಟ್ ಬಳಿ ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕರಾಳ ಗುರುವಾರ

ರಾಜ್ಯದ ಪಾಲಿಗೆ ಡಿ.25ರ ದಿನ ʼಕರಾಳ ಗುರುವಾರʼವಾಗಿ ಪರಿಣಮಿಸಿದೆ. ಚಿತ್ರದುರ್ಗದ ಬಸ್‌ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದರು. ಬಳಿಕ ಮೈಸೂರು ಅರಮನೆ ಬಳಿ ನೈಟ್ರೋಜನ್‌ ಸಿಲಿಂಡರ್‌ ಸ್ಫೋಟವಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿ ಸಾಗುತ್ತಿದ್ದ ನಾಲ್ವರು ಮೃತಪಟ್ಟಿರುವುದು ಕಂಡುಬಂದಿದೆ.