ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mysuru News: ಪ್ರವಾಸಕ್ಕೆ ಹೋಗಲು ಗಂಡ ಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ

ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದೆ. ನೆನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಶರಣಾದ ಮಹಿಳೆ ಸಂಧ್ಯಾ.

ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆದರೆ, ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.

ನಗರದ ಸರಸ್ವತಿಪುರಂನ ನಿವಾಸಿ ಸಂಧ್ಯಾ (46) ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬುವವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜತೆ ವಾಸವಿದ್ದರು.

ನೆನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಆದರೆ, ತನ್ನ ಅಕ್ಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

street dog Attack: ಐದು ಮಕ್ಕಳಿಗೆ ಯದ್ವಾತದ್ವಾ ಕಚ್ಚಿ ಗಾಯಗೊಳಿಸಿದ ರಕ್ಕಸ ಬೀದಿ ನಾಯಿಗಳು

ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯ ಹಲ್ಲೆ

ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಪ್ರಶ್ನಿಸಿ ತಡೆಯಲು ಮುಂದಾದ ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ ಘಟನೆ ನಗರದಲ್ಲಿರುವ ಡಾ. ಮಾಲಕರೆಡ್ಡಿ ಹೋಮಿಯೋಪ್ಯಾಥಿಕ್ ಮೆಡಿಕಲ್ ಕಾಲೇಜನಲ್ಲಿ ನಡೆದಿದೆ.

ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಆಂತರಿಕ ಪರೀಕ್ಷೆ (ಇಂಟರ್ನಲ್ ಎಕ್ಸಾಮ್) ನಡೆಯುತ್ತಿದ್ದ ವೇಳೆ ಶಹಬಾಜ್ ಎಂಬ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ನಕಲು ಮಾಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಅವರು ವಿದ್ಯಾರ್ಥಿಯನ್ನು ಪ್ರಶ್ನಿಸಿ, ಉತ್ತರ ಪತ್ರಿಕೆಯನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪತ್ರಿಕೆ ಪಡೆದು ತರಗತಿ ಕೊಠಡಿಯಿಂದ ಹೊರಗೆ ಹೋಗುವಂತೆ ಸೂಚಿಸಿದ್ದರಿಂದ ವಿದ್ಯಾರ್ಥಿ ಕೋಪಗೊಂಡು ಸಹಾಯಕ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಪರೀಕ್ಷಾ ಹಾಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಗೊಂಡಿದೆ ಎಂದು ತಿಳಿದುಬಂದಿದೆ.

ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಇತರೆ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಳಿಕ ಆರೋಪಿತ ವಿದ್ಯಾರ್ಥಿ ಪರೀಕ್ಷಾ ಹಾಲ್‌ನಿಂದ ತೆರಳಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಯ ಪೋಷಕರ ಗಮನಕ್ಕೆ ವಿಚಾರವನ್ನು ತಂದಿದ್ದು, ಶಿಸ್ತು ಕ್ರಮವಾಗಿ ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಈವರೆಗೂ ಹಲ್ಲೆಗೆ ಒಳಗಾದ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಅವರು ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲವೆಂದು ತಿಳಿದುಬಂದಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ಮತ್ತು ಶಿಸ್ತು ಕ್ರಮಗಳ ಬಗ್ಗೆ ಕಾಲೇಜು ಆಡಳಿತದಿಂದ ಮುಂದಿನ ಕ್ರಮಗಳನ್ನು ನಿರೀಕ್ಷಿಸಲಾಗಿದೆ.