ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉದ್ಯೋಗದ ಸ್ಥಳದಲ್ಲಿ ಮಾನಸಿಕ ಕಿರುಕುಳ: ಡೆತ್‌ನೋಟ್‌ನಲ್ಲಿ ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

Self-harming: ಉದ್ಯೋಗದ ಸ್ಥಳದಲ್ಲಿ ಕಿರುಕುಳ ತಾಳಲಾರದೆ 45 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನಾ ಸ್ಥಳದಿಂದ ವಶಪಡಿಸಿಕೊಂಡ ಡೆತ್‌ನೋಟ್‌ನಲ್ಲಿ, ಹೊಸದಾಗಿ ನೇಮಕಗೊಂಡ ಡಾಲಿ ಎಂಬ ಮೇಲ್ವಿಚಾರಕನಿಂದ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸಿರುವುದಾಗಿ ಆರೋಪಿಸಿದ್ದಾರೆ.

ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ಮಹಿಳೆ ನಾಗೇಶ್ವರಿ (ಸಂಗ್ರಹ ಚಿತ್ರ) -

Priyanka P
Priyanka P Aug 9, 2026 9:46 PM

ಮೈಸೂರು, ಆ. 9: ಉದ್ಯೋಗದ ಸ್ಥಳದಲ್ಲಿ ಕಿರುಕುಳ ತಾಳಲಾರದೆ 45 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ (Self-harming) ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ, ಕೆಲಸದ ಸ್ಥಳದಲ್ಲಿ ಸೂಪರ್‌ವೈಸರ್‌ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ಅವರು ಆರೋಪಿಸಿದ್ದಾರೆ. ಮೃತರನ್ನು ನಾಗೇಶ್ವರಿ ಎಂದು ಗುರುತಿಸಲಾಗಿದೆ.

ಅವರು ಸೂಪರ್ ಮಾರ್ಕೆಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಅವರು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳದಿಂದ ವಶಪಡಿಸಿಕೊಂಡ ಡೆತ್‌ನೋಟ್‌ನಲ್ಲಿ, ಹೊಸದಾಗಿ ನೇಮಕಗೊಂಡ ಡಾಲಿ ಎಂಬ ಮೇಲ್ವಿಚಾರಕನಿಂದ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸಿರುವುದಾಗಿ ಆರೋಪಿಸಿದ್ದಾರೆ.

ತನಗೆ ವಾರದ ರಜೆ ನಿರಾಕರಿಸಲಾಯಿತು. ತಾನು ಮಾಡದ ತಪ್ಪುಗಳನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಯಿತು ಎಂದು ಅವರು ಬರೆದಿದ್ದಾರೆ. ಅನಾರೋಗ್ಯದ ಕಾರಣ ಎರಡು-ಮೂರು ದಿನಗಳ ರಜೆಯ ನಂತರ ಹಠಾತ್ತನೆ ಕೆಲಸದಿಂದ ವಜಾಗೊಳಿಸಲಾಯಿತು ಎಂದು ನಾಗೇಶ್ವರಿ ಆರೋಪಿಸಿದ್ದಾರೆ. ಕೆಲಸದಲ್ಲಿ ತನ್ನನ್ನು ನಡೆಸಿಕೊಂಡ ರೀತಿಯಿಂದ ತೀವ್ರವಾಗಿ ನೊಂದಿದ್ದರಿಂದ ಈ ಕಠಿಣ ಕ್ರಮ ಕೈಗೊಳ್ಳಬೇಕಾಯಿತು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ; ಭಾರತೀಯ ಯೋಧನ ಬಂಧನ

ಹೊರಗೆ ಹೋಗಿದ್ದ ತಾನು ವಾಪಸ್ ಮನೆಗೆ ಬಂದಾಗ ಪತ್ನಿ ಮನೆಯ ನೆಲದ ಮೇಲೆ ನಿರ್ಜೀವವಾಗಿ ಬಿದ್ದಿರುವುದನ್ನು ನೋಡಿದ್ದಾಗಿ ನಾಗೇಶ್ವರಿ ಅವರ ಪತಿ ಅಶೋಕ್ ಹೇಳಿದ್ದಾರೆ. ಮಧ್ಯಾಹ್ನ ಅಶೋಕ್ ತನ್ನ ಪತ್ನಿಗೆ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ್ದರಿಂದ ಆತಂಕಗೊಂಡ ಮನೆಗೆ ಧಾವಿಸಿದಾಗ ಪತ್ನಿ ವಿಷ ಸೇವಿಸಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸಿದ್ದಾರೆ.

ತಕ್ಷಣವೇ ಪತಿ ಅಶೋಕ್ ನಾಗೇಶ್ವರಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ನಾಗೇಶ್ವರಿ ಮೃತಪಟ್ಟಿದ್ದಾರೆಂದು ಘೋಷಿಸಿದರು. ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಲಾದ ಆರೋಪಗಳು ಮತ್ತು ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಾಸ್ಟೆಲ್‌ನಲ್ಲಿ ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 20 ವರ್ಷದ ರಕ್ಷಣ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿ, ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್‌ನ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದಾಶಿವನಗರ ಪೊಲೀಸರು ಮಾಹಿತಿ ನೀಡಿದ್ದಾರೆ.