ಮೈಸೂರು: ಮನೆ ಬಳಿಯ ರಸ್ತೆಯಲ್ಲಿ ಬಿದ್ದಿದ್ದ ಅಡಕೆ (Areca nut) ಮಾದರಿಯ ವಸ್ತುವನ್ನು ಅಡಕೆ ಎಂದೇ ಭಾವಿಸಿ ಕಲ್ಲಿನಿಂದ ಜಜ್ಜಿ ಚೂರು ಮಾಡುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು (blast) ಮಹಿಳೆಯೊಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ಕಾಡು ಹಂದಿ ಬೇಟೆಗೆ ಇಡುವ ಸಿಡಿಮದ್ದು ಸ್ಫೋಟಗೊಂಡು (Mysuru news) ತಾಲೂಕಿನ ಗಾವಡಗೆರೆ ಹೋಬಳಿಯ ಹುಲ್ಯಾಳು ಗ್ರಾಮದ ಲೋಕೇಶ್ ಅವರ ಪತ್ನಿ ಕಮಲಮ್ಮ ಎಂಬವರು ತೀವ್ರ ಗಾಯಗೊಂಡಿದ್ದಾರೆ.
ಶುಕ್ರವಾರ ಜಮೀನಿನಿಂದ ಮನೆಗೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಬಿದ್ದಿದ್ದ ವಸ್ತುವನ್ನು ಅಡಿಕೆ ಎಂದು ಭಾವಿಸಿ ಮನೆ ಮುಂದೆಯೇ ಕಲ್ಲಿನಿಂದ ಜಜ್ಜುತ್ತಿದ್ದಂತೆ ಸಿಡಿಮದ್ದು ಏಕಾಏಕಿ ಸ್ಫೋಟಗೊಂಡು ಮುಖ, ಕೈ, ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಜೋರಾದ ಶಬ್ದ ಕೇಳಿದ ಅಕ್ಕಪಕ್ಕದವರು ಧಾವಿಸಿ ತಕ್ಷಣವೇ ಕೆ.ಆರ್.ನಗರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು
ಹಾವೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ (Haveri News) ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿದ್ದ ತೆಂಗಿನಮರದ ಬಳಿ ಹಾದು ಹೋಗಿದ್ದ ವಿದ್ಯುತ್ ತಂತಿ ಬಿದ್ದು ಅವಘಡ ನಡೆದಿದೆ.
ಹಂಸಭಾವಿ ಗ್ರಾಮದ ಮೃತ್ಯುಂಜಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅವಘಡ ಸಂಭವಿಸಿದೆ. ಮಹಮ್ಮದ್ ಶಾ ಗೌಸ್ ರಟ್ಟಿಹಳ್ಳಿ (12) ಮೃತ ಬಾಲಕ. ಇನ್ನಿಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ಮಧ್ನಾಹ್ನ ಊಟಕ್ಕೆ ಬಿಟ್ಟ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder Case: ಅಕ್ಕನ ಪಕ್ಕಕ್ಕೆ ಬಂದು ಸಿಕ್ಕಿಹಾಕಿಕೊಂಡವನನ್ನು ಕಲ್ಲು ಎತ್ತಿ ಹಾಕಿ ಕೊಂದ ತಮ್ಮ