ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ; ಏ. 4ಕ್ಕೆ ಪ್ರಶಸ್ತಿ ಪ್ರದಾನ

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್‌ ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜ ಗೌರವಕ್ಕೆ ಆಯ್ಕೆಯಾಗಿದ್ದಾರೆ.

ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ

ಸಾಹಿತಿ ಕುಂ.ವೀರಭದ್ರಪ್ಪ, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್‌, ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್

Profile Prabhakara R Apr 2, 2025 4:27 PM

ಹೊಸಪೇಟೆ: ಸಾಹಿತಿ ಕುಂ.ವೀರಭದ್ರಪ್ಪ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಶಿವರಾಜ್ ವಿ. ಪಾಟೀಲ್‌ ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್ ಅವರಿಗೆ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಗೌರವ ಘೋಷಿಸಲಾಗಿದೆ. ಹಂಪಿ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ನಾಡೋಜ ಗೌರವ ಪದವಿಗೆ ಭಾಜನರಾದ ಮೂವರು ಮಹನೀಯರ ಹೆಸರುಗಳನ್ನು ಹಂಪಿ ವಿವಿ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಪ್ರಕಟಿಸಿದ್ದು, ಏ. 4ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಘಟಿಕೋತ್ಸವದ ಪ್ರಯುಕ್ತ ಮಂಟಪ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಮಾತನಾಡಿದ್ದು, ಬೆಂಗಳೂರಿನ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಶಿವರಾಜ್ ವಿ. ಪಾಟೀಲ್‌, ವಿಜಯನಗರ ಜಿಲ್ಲೆ ಕೊಟ್ಟೂರಿನ ಪ್ರಖ್ಯಾತ ಬರಹಗಾರರು ಮತ್ತು ಚಿಂತಕ ಕುಂ.ವೀರಭದ್ರಪ್ಪ(ಕುಂ.ವೀ), ಧಾರವಾಡದ ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮಶ್ರೀ ಎಂ.ವೆಂಕಟೇಶ್‌ಕುಮಾರ್ ಅವರು ನಾಡೋಜ ಗೌರವಕ್ಕೆ ಆಯ್ಕೆಯಾಗಿದ್ದು, ಏ.4ರಂದು ರಾಜ್ಯಪಾಲರು ನಾಡೋಜ ಗೌರವ ಪದವಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ, ಸಮಕುಲಾಧಿಪತಿ ಡಾ.ಎಂ.ಸಿ. ಸುಧಾಕರ್ ಅವರು ಡಿ.ಲಿಟ್ ಹಾಗೂ ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡುತ್ತಾರೆ. ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ಬೆಂಗಳೂರಿನ ರಾಮಯ್ಯ ತಾಂತ್ರಿಕ ಸಂಸ್ಥೆಯ ಮುಖ್ಯ ಸಂಶೋಧನಾ ಸಲಹೆಗಾರರಾದ ಪ್ರೊ.ರಾಜಾಸಾಬ್ ಎ.ಎಚ್. ಅವರು ಘಟಿಕೋತ್ಸವ ಭಾಷಣ ಮಾಡುತ್ತಾರೆ ಎಂದರು.

ಈ ಸುದ್ದಿಯನ್ನೂ ಓದಿ | Imran Khan: ಭ್ರಷ್ಟಾಚಾರ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ 'ನೊಬೆಲ್​ ಶಾಂತಿ' ಪ್ರಶಸ್ತಿಗೆ ನಾಮನಿರ್ದೇಶನ!

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಡಾ. ವಿಜಯ್ ಪೂಣಚ್ಚ ತಂಬಂಡ, ಡಾ.ಎ. ಶ್ರೀಧರ, ಡಾ.ಅಮರೇಶ ಯತಗಲ್, ಡಾ.ಎಫ್.ಟಿ.ಹಳ್ಳಿಕೇರಿ, ಡಾ.ಚಲುವರಾಜು, ಡಾ.ಶಿವಾನಂದ ಎಸ್. ವಿರಕ್ತಮಠ, ಡಾ.ಶೈಲಜ ಇಂ. ಹಿರೇಮಠ, ಡಾ.ಅಶೋಕುಮಾರ ರಂಜೇರೆ, ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಡಾ.ಎಸ್.ಆರ್. ಚನ್ನವೀರಪ್ಪ, ಡಾ.ಈ.ಎರ‍್ರಿಸ್ವಾಮಿ, ಡಾ.ಎಸ್.ವೈ. ಸೋಮಶೇಖರ, ಡಾ. ಎ. ವೆಂಕಟೇಶ, ಡಾ.ಡಿ. ಮೀನಾಕ್ಷಿ ಇತರರಿದ್ದರು.