ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nandi Hills: ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ನಂದಿ ಗಿರಿಧಾಮ

ಹರೀಶ್‌ ಕೇರ ಹರೀಶ್‌ ಕೇರ Mar 24, 2025 6:54 AM

ಚಿಕ್ಕಬಳ್ಳಾಪುರ: ಜಿಲ್ಲೆಯ (chikkaballapuara) ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು (Nandi hills) ನವೀಕರಣ ಕಾಮಗಾರಿಯ (renovation) ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಮರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ಇಂದಿನಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ.

ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಾರಾಂತ್ಯದ ದಿನವಾದ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವಾರದ 5 ದಿನಗಳು ಸಂಚಾರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಾರ್ಚ್ 24ರ ಇಂದಿನಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಜಾರಿಯಲ್ಲಿ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಡಾಮರೀಕರಣ ಕಾಮಗಾರಿ ನಡೆಯಲಿದೆ ಎಂದು ಆದೇಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂತ್ರಾಲಯ ಮಠಕ್ಕೆ ಹರಿದು ಬಂತು ಕಾಣಿಕೆಯ ಪ್ರವಾಹ

ರಾಯಚೂರು: ರಾಯಚೂರು: ಇಲ್ಲಿನ ರಾಯರ ಮಠಕ್ಕೆ ಕಾಣಿಕೆಯ ಮಹಾಪೂರವೇ ಹರಿದು ಬಂದಿದೆ. ಬರೋಬ್ಬರಿ 3.48 ಕೋಟಿ ನಗದು, 1 ಕೆಜಿ ಬೆಳ್ಳಿ, 32 ಗ್ರಾಂ ಚಿನ್ನ ಹುಂಡಿಯಲ್ಲಿ ದೊರೆತಿದೆ. ಮಾರ್ಚ್‌ನಲ್ಲಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವೈಭವೋತ್ಸವ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಹೀಗಾಗಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿತ್ತು.

ರಾಜ್ಯ, ಹೊರ ರಾಜ್ಯ, ವಿದೇಶದಿಂದಲೂ ಭಕ್ತ ಸಾಗರ ಮಂತ್ರಾಲಯಕ್ಕೆ ಭೇಟಿ ನೀಡಿದೆ. ಹೀಗಾಗಿ ನಗದು, ಚಿನ್ನಾಭರಣವನ್ನು ಕಾಣಿಕೆಯಾಗಿ ಹುಂಡಿಗೆ ಸಮರ್ಪಿಸಿದ್ದಾರೆ. ಕಾಣಿಕೆ ಹುಂಡಿಯನ್ನು ನಿನ್ನೆ ಎಣಿಕೆ ಮಾಡಲಾಗಿದೆ. ಈ ವೇಳೆ 3,48,69,621 ರೂ. ನಗದು, 32 ಗ್ರಾಂ ಚಿನ್ನ ಮತ್ತು 1.24 ಕೆಜಿ ಬೆಳ್ಳಿ ದೇಣಿಗೆಯಾಗಿ ಸಂಗ್ರಹವಾಗಿರುವುದು ಕಂಡುಬಂದಿದೆ.

ಇದನ್ನೂ ಓದಿ: Weather forecast: ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!