Narendra Modi Udupi Visit: ಉಡುಪಿಯಲ್ಲಿ ಪ್ರಧಾನಿ ಮೋದಿಗೆ ʼಭಾರತ ಭಾಗ್ಯ ವಿಧಾತʼ ಬಿರುದು ಸಲ್ಲಿಕೆ
Narendra Modi Udupi Visit: ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು. ʼನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆʼ ಎಂದು ಶ್ರೀಗಳು ಶ್ಲಾಘಿಸಿದರು.
ಉಡುಪಿಯಲ್ಲಿ ಮೋದಿಗೆ ತಿಲಕ -
ಉಡುಪಿ, ನ.28 : ಉಡುಪಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi Udupi Visit) ಅವರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹಪೂರ್ವಕವಾಗಿ ʼಭಾರತ ಭಾಗ್ಯ ವಿಧಾತʼ ಎಂದು ಬಿರುದನ್ನು ನೀಡಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು.
ನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮನನ್ನು ಸ್ಥಾಪಿಸಿ ಶ್ರೀ ಕೃಷ್ಣನ ಕ್ಷೇತ್ರಕ್ಕೆ ಮೋದಿ ಆಗಮಿಸಿದ್ದಾರೆ. 14 ವರ್ಷದ ಮೇಲೆ ಶ್ರೀರಾಮ ಅಯೋಧ್ಯೆಗೆ ಮರಳಿದ್ದ. ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 14 ವರ್ಷದ ಹಿಂದೆ ನರೇಂದ್ರ ಮೋದಿಯವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಂದಿದ್ದರು. ಆಗಲೂ ನಮ್ಮ ಪರ್ಯಾಯ ನಡೆಯುತ್ತಿತ್ತು. ನಮ್ಮದು ಇಂದ್ರ ಪರ್ಯಾಯ, ನಾನು ಸುಗುಣೇಂದ್ರ ಅವರು ನರೇಂದ್ರ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಇದಕ್ಕೂ ಮುನ್ನ ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದರು. ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದರು. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನವನ್ನು ಮೋದಿ ಪಡೆದರು. ಮಠದಲ್ಲಿ ಈ ಸಂದರ್ಭದಲ್ಲಿ ಇದ್ದ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಿರೂರು ವೇದವರ್ಧನ ತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಮೋದಿಯವರು ಮಾತನಾಡಿಸಿದರು.
Narendra Modi Udupi Visit: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ
ಗೀತಾ ಮಂದಿರದಲ್ಲಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ ಮಾಡಿದ ಮೋದಿ, ಧ್ಯಾನ ಮಂದಿರದ ಗೋಡೆಯ ಶಿಲೆಯಲ್ಲಿ ಭಗವದ್ಗೀತೆ ಬರಹ ಹಾಗೂ ಧ್ಯಾನ ಮಂದಿರವನ್ನು ವೀಕ್ಷಣೆ ಮಾಡಿದರು. ನಂತರ ವಿಶ್ವ ಗೀತಾ ಪರಾಯಣದ ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಸಾವಿರಾರು ಮೋದಿ ಅಭಿಮಾನಿಗಳಿಂದ ಜಯಘೋಷ ಮೊಳಗಿತು.
ಕನಕದಾಸರ ವಿಗ್ರಹಕ್ಕೆ ಹೂಮಾಲೆ ಹಾಕಿದ ಪ್ರಧಾನಿ ಮೋದಿಯವರ ಹಣೆಗೆ ಮಾಧ್ವ ಸಂಪ್ರದಾಯದ ಅಂಗಾರಕ ಅಕ್ಷತೆ ತಿಲಕವನ್ನು ಪುತ್ತಿಗೆ ಶ್ರೀ ಹಾಕಿದರಲ್ಲದೆ, ತೀರ್ಥ ಹಾಗೂ ಪ್ರಸಾದ ನೀಡಿದರು. ತೀರ್ಥದ ಜೊತೆ ತುಳಸಿ ಮಣಿಯನ್ನು ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮೋದಿಯವರನ್ನು ಸ್ವಾಗತಿಸಿದರು. ಪುತ್ತಿಗೆ ಶ್ರೀ ಸುಗುಣೇಂದ್ರ ಸ್ವಾಮೀಜಿ ಸಂಸ್ಕೃತದಲ್ಲೇ ಪ್ರಸ್ತಾವಿಕ ಧರ್ಮ ಸಂದೇಶ ನೀಡಿದರು.
PM Modi Udupi Visit Live: ಬಾಲಕಿಯ ಫೋಟೋ ಗಿಫ್ಟ್ ಪಡೆದ ಪ್ರಧಾನಿ ನರೇಂದ್ರ ಮೋದಿ
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ, ನೆರೆದ ಸಾವಿರಾರು ಮಂದಿಯ ಜೊತೆಗೆ ಗೀತೆಯ ಹತ್ತು ಶ್ಲೋಕಗಳನ್ನು ಸಾಮೂಹಿಕವಾಗಿ ಓದಿದರು. ಇದಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೆ ಜನರು ಮೋದಿಯವರಿಗೆ ಹೂ ಮಳೆ ಸುರಿಸಿದ್ದಾರೆ. ಮೋದಿಯವರನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ನೆರೆದು ಅವರಿಗೆ ಸ್ವಾಗತ ಕೋರಿದರು.