Neeraj Chopra Classic-2025: ನೀರಜ್ ಚೋಪ್ರಾ ಕ್ಲಾಸಿಕ್- 2025 ಜಾವೆಲಿನ್ ಸ್ಪರ್ಧೆ; ವಿಜೇತರಿಗೆ ಪದಕ ಪ್ರದಾನ ಮಾಡಿದ ಸಿಎಂ, ಗವರ್ನರ್
Neeraj Chopra Classic-2025: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ʼನೀರಜ್ ಚೋಪ್ರಾ ಕ್ಲಾಸಿಕ್- 2025ʼ ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜತೆಯಾಗಿ ಪಾಲ್ಗೊಂಡು, ವಿಶ್ವ ಶ್ರೇಷ್ಠ ಜಾವೆಲಿನ್ ಎಸೆತಗಾರರ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.


ಬೆಂಗಳೂರು: ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ʼನೀರಜ್ ಚೋಪ್ರಾ ಕ್ಲಾಸಿಕ್- 2025ʼ (Neeraj Chopra Classic-2025) ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜತೆಯಾಗಿ ಪಾಲ್ಗೊಂಡು, ವಿಶ್ವ ಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದರು.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವ ಚಾಂಪಿಯನ್, ವಿಶ್ವ ನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭ ಕೋರಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಜೇತರಿಗೆ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿ, ಗೌರವಿಸಿದರು.
ಈ ಸಂದರ್ಭದಲ್ಲಿ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | Karnataka Rains: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಜುಲೈ 9ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!